ರಾಸಲೀಲೆ ಸಿಡಿ ಪ್ರಕರಣ: ಡಿಕೆ ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ಒತ್ತಾಯ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್  ಪಡೆದುಕೊಳ್ಳುತ್ತಿದ್ದು, ಯುವತಿಯದ್ದು ಎನ್ನಲಾದ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪವಾಗಿದೆ.

ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ, ಇದೀಗ ಈ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿಯೇ ಎಂದು ಪ್ರಶ್ನಿಸಿದೆ.

ಯುವತಿಯದ್ದು ಎನ್ನಲಾದ ಆಡಿಯೋದಲ್ಲಿ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪವಾಗುತ್ತಿದ್ದಂತೆ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಬಿಜೆಪಿ,  ಆ ಪ್ರಕರಣದ ʼಸಂತ್ರಸ್ಥೆʼ ನೇರವಾಗಿ  ಮಹಾನಾಯಕನ ಹೆಸರು ಪ್ರಸ್ತಾಪ ಮಾಡಿದ್ದಾಳೆ. ಮಹಾನಾಯಕ ನಮ್ಮ ಜೊತೆ ಇದ್ದಾನೆ ಎಂಬ ಮಾತುಗಳನ್ನಾಡಿದ್ದಾಳೆ. ಸದನದಲ್ಲಿ ಬೊಬ್ಬಿರಿದ ಮಹಾಶೂರರು ಈಗೇನು ಹೇಳುತ್ತಾರೆ? ಕಾಂಗ್ರೆಸ್‌ ಕಚೇರಿಯಲ್ಲೇ ಷಡ್ಯಂತ್ರ ನಡೆದಿದೆಯೇ!? ಎಂದು ಅನುಮಾನ ವ್ಯಕ್ತಪಡಿಸಿದೆ.ಆರಂಭದಿಂದಲೂ ಮಹಾನಾಯಕನ ಸುತ್ತಲೂ ಪ್ರಕರಣ  ಗಿರಕಿ ಹೊಡೆಯುತ್ತಿತ್ತು.

ಮಹಾನಾಯಕನ ಮನೆಯ ಬಳಿಗೆ ನಾನು ಬಂದಿದ್ದೇನೆ ಎಂದು ಸಂತ್ರಸ್ಥೆ ಹೇಳಿಕೊಂಡಿದ್ದಾಳೆ. ಮಹಾನಾಯಕನಿಗೂ ಪ್ರಕರಣದ ಮಾಸ್ಟರ್‌ ಮೈಂಡ್‌ಗಳಿಗೂ ಇರುವ ಸಂಬಂಧವವನ್ನು ಕಾಂಗ್ರೆಸ್  ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದೆ.ಸಿಡಿ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪವಾಗಿದ್ದು, ಮಹಾನಾಯಕನ ರಾಜೀನಾಮೆಯನ್ನು ರಾಷ್ಟ್ರೀಯ ಮಹಾನಾಯಕಿ ತಕ್ಷಣವೇ ಪಡೆಯಬೇಕು. ಹೆಣ್ಣನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರ ಪಡೆಯಲು ಷಡ್ಯಂತ್ರ ರೂಪಿಸಿದ ಕಾಂಗ್ರೆಸ್ ಜನತೆಯ ಕ್ಷಮಾಪಣೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

Leave a Reply

Your email address will not be published. Required fields are marked *

error: Content is protected !!