ಭಾರತ-ಚೀನಾ ನಡುವೆ ಸಂಘರ್ಷ: 3 ಭಾರತೀಯ ಯೋಧರು ಹುತಾತ್ಮ
ಲಡಾಖ್: ಪೂರ್ವ ಲಡಾಕ್ ನಲ್ಲಿ ಸೇನೆ ಜಮಾವಣೆ ಮಾಡಿ ಭಾರತಕ್ಕೆ ಉಪಟಳ ನೀಡುತ್ತಿರುವ ಚೀನಾದ ಸೈನಿಕರು ನಿನ್ನೆ ರಾತ್ರಿ ಕರ್ನಲ್ ಸೇರಿದಂತೆ ಮೂವರು ಭಾರತೀಯ ಯೋಧರನ್ನು ಹತ್ಯೆಗೈದಿದ್ದಾರೆ.
ಭಾರತ-ಚೀನಾ ನಡುವಿನ ಯೋಧರ ಸಂಘರ್ಷದಲ್ಲಿ ಚೀನಾ ಸೈನಿಕರು ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಕರ್ನಲ್ ಸೇರಿದಂತೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಭಾರತ ಗಡಿಗೆ ಚೀನಾ ಸೈನಿಕರು ಅತಿಕ್ರಮ ಪ್ರವೇಶ ಮಾಡಿದ್ದರು. ಇದರಿಂದಾಗಿ ಕಳೆದ ರಾತ್ರಿ ಭಾರತೀಯ ಯೋಧರು ಚೀನಾ ಸೈನಿಕರನ್ನು ನಿಯಂತ್ರಿಸಲು ಮುಂದಾಗಿದ್ದರು. ಈ ವೇಳೆ ನೂಕಾಟ, ತಳ್ಳಾಟ ನಡೆದಿತ್ತು.
ಅತಿಕ್ರಮ ಪ್ರದೇಶದಿಂದ ಹಿಂದೆ ಸರಿಯುವಂತೆ ಚೀನಾ ಸೈನಿಕರಿಗೆ ಭಾರತೀಯ ಯೋಧರು ಎಚ್ಚರಿಕೆ ನೀಡಿದ್ದರು. ಆದರೆ ಇದಕ್ಕೆ ಚೀನಾ ಸೈನಿಕರು ಸೊಪ್ಪು ಹಾಕಲಿಲ್ಲ. ಇದರಿಂದಾಗಿ ಉಭಯ ಸೈನಿಕರ ನಡುವೆ ಸಂಘರ್ಷ ಶುರುವಾಗಿತ್ತು.
ಆದರೆ ಚೀನಾ ಸೈನಿಕರು ದಿಢೀರ್ ಅಂತಾ ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಚೀನಾ ಮತ್ತು ಭಾರತ ಗಡಿ ವಿವಾದದಲ್ಲಿ ನೂಕಾಟ ಮತ್ತು ತಳ್ಳಾಟ ನಡೆಯುವುದು ಸಾಮಾನ್ಯವಾಗಿತ್ತು. ಆದರೆ ಗುಂಡಿನ ದಾಳಿ ನಡೆದಿರಲಿಲ್ಲ. ಇದೇ ಮೊದಲ ಬಾರಿಗೆ ಚೀನಾ ಸೈನಿಕರು ಗುಂಡಿನ ದಾಳಿ ನಡೆಸಿರುವುದು ಉಭಯ ದೇಶಗಳ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಕ್ಕೆ ಕಾರಣವಾಗಿದೆ.