ಸಿಡಿ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರ ಬಹುದು, ಆದರೆ ಭೇಟಿ ಮಾಡಿಲ್ಲ: ಡಿಕೆಶಿ

ಬೆಂಗಳೂರು: ಮಾಜಿ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ ಅವರು ನನ್ನನ್ನು ಭೇಟಿ ಮಾಡಿಲ್ಲ ಎಂದು ಡಿಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ನಿನ್ನೆ ಮಾಧ್ಯಮಕ್ಕೆ ಬಿಡುಗಡೆಯಾದ ಸಿಡಿ ಯುವತಿ ಮಾತನಾಡಿರುವುದು ಎನ್ನಲಾಗುತ್ತಿರುವ ಆಡಿಯೋದಲ್ಲಿ ಡಿಕೆ ಶಿವಕುಮಾರ್ ಅವರ ಹೆಸರು ಪ್ರಸ್ತಾಪವಾಗಿದ್ದು, ಈ ಬಗ್ಗೆ ಇಂದು ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, ಯುವತಿ ನನ್ನ ಭೇಟಿಗೆ ಯತ್ನಿಸಿರಬಹುದು. ಆದರೆ ನನ್ನನ್ನು ಭೇಟಿ ಮಾಡಿಲ್ಲ. ಕಷ್ಟ ಅಂತ ಬಂದವರಿಗೆ ನಾನು ಸಹಾಯ ಮಾಡುತ್ತೇನೆ ಎಂದಿದ್ದಾರೆ.

ಯುವತಿ ಡಿಕೆ ಶಿವಕುಮಾರ್ ಅವರ ಭೇಟಿಗೆ ಪ್ರಯತ್ನಿಸಿದ್ದೆ ಎಂದು ಹೇಳಿದ್ದಾರೆ. ನೊಂದವರು ಪ್ರಾಮಾಣಿಕರಾಗಿದ್ದರೆ ನಾವು ಅವರಿಗೆ ಸಹಾಯ ಮಾಡುತ್ತೇವೆ. ಸಹಾಯ ಕೇಳಿಕೊಂಡು ನನ್ನ ಕಚೇರಿಗೆ ನಿತ್ಯ ನೂರಾರು ಜನ ಬರುತ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದೇ ವೇಳೆ ಸಿಡಿ ಪ್ರಕರಣದ ಮತ್ತೊಬ್ಬ ಆರೋಪಿ, ಮಾಜಿ ಪತ್ರಕರ್ತ ನರೇಶ್ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ನರೇಶ್ ನನಗೆ ಬೇಕಾದ ಹುಡುಗ. ನಾನು ಆತನನ್ನು ಭೇಟಿ ಮಾಡಿದ್ದೇನೆ, ಕೆಲವು ವಿಚಾರಗಳನ್ನು ಆತನಿಂದ ತಿಳಿದುಕೊಂಡಿದ್ದೇನೆ ಎಂದಿದ್ದಾರೆ.

ಇನ್ನು ರಮೇಶ್ ಜಾರಕಿಹೊಳಿಗೆ ನನ್ನ ಬಗ್ಗೆ ಅನುಕಂಪ ಇದ್ದರೆ ಸಂತೋಷ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!