ಹಿರಿಯಡಕ: ಆರ್ಥಿಕ ಸಂಕಷ್ಟಕ್ಕೆ ನೊಂದು ಬಡಗಿ ಆತ್ಮಹತ್ಯೆ

ಹಿರಿಯಡಕ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕ ಕೊಂಡಾಡಿ ಭಜನೆ ಕಟ್ಟೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ದೇವೇಂದ್ರ ಆಚಾರ್ಯ( ಮುನ್ನ) ಆತ್ಮಹತ್ಯೆ ಮಾಡಿಕೊಂಡವರು. ಇವರು ಮರದ ಕೆಲಸ ಮಾಡಿಕೊಂಡಿದ್ದರು. ಕೋವಿಡ್ ಲಾಕ್ ಡೌನ್ ಬಳಿಕ ಸರಿಯಾಗಿ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟ ಉಂಟಾಗಿದ್ದು, ಖಿನ್ನತೆಗೆ ಒಳಗಾಗಿದ್ದರು.

ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!