ಸದನದಲ್ಲಿ ಬೊಬ್ಬೆ ಹಾಕಿದ ಶೂರರೆಲ್ಲಾ ಏಕೆ ಇಂದು ಮೌನವಾಗಿದ್ದಾರೆ? ಮಹಾನಾಯಕ ಇನ್ನೂ ಏಕೆ ರಾಜೀನಾಮೆ ಸಲ್ಲಿಸಿಲ್ಲ? ರಾಜ್ಯ ಬಿಜೆಪಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಹೆಸರು ಕೇಳಿ ಬಂದಿರುವ ಸಂಬಂಧ ಘಟಕ ಟ್ವೀಟ್ ಮಾಡಿದೆ. 

ಸೆಕ್ಸ್ ಸಿಡಿ ಹಗರಣದ ಆರೋಪಿಗಳೊಂದಿಗೆ ಸಂಬಂಧವಿರುವುದನ್ನು ಮಹಾನಾಯಕ ಒಪ್ಪಿಕೊಂಡಿದ್ದಾರೆ. ಪ್ರಕರಣದ ಮಾಸ್ಟರ್ ಮೈಂಡ್‌ಗಳೊಂದಿಗೆ ಯಾವ ರೀತಿಯ ಸಂಬಂಧವಿತ್ತೆಂಬುದನ್ನು ರಾಜ್ಯದ ಜನತೆಯ‌ ಮುಂದೆ ಖಳನಾಯಕ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದೆ. 

ಸದನದಲ್ಲಿ ಬೊಬ್ಬೆ ಹಾಕಿದ ಶೂರರೆಲ್ಲಾ ಏಕೆ ಇಂದು ಮೌನವಾಗಿದ್ದಾರೆ? ಷಡ್ಯಂತ್ರದ ಹಿಂದೆ ಮಹಾನಾಯಕನ ಹೆಸರು ಪ್ರಸ್ತಾಪವಾಗಿದೆ. ಇತರ ಆರೋಪಿಗಳಂತೆ ಮಹಾನಾಯಕ ಕೂಡಾ ಆರೋಪಿಯಲ್ಲವೇ? ರಾಜಕಾರಣದಲ್ಲಿ ಅತಿಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿರುವ ಮಹಾನಾಯಕ ಏಕೆ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ?

ಪಕ್ಷಕ್ಕೆ ಬದ್ಧತೆ ಅನ್ನುವುದಿದ್ದರೆ ಮೊದಲು ಮಹಾನಾಯಕನ ರಾಜೀನಾಮೆ ಪಡೆಯಲಿ. ಸಿಡಿ ಪ್ರಕರಣ ಸಂಬಂಧಿತವಾಗಿ ಪಕ್ಷದ ನಾಯಕರು ಸದನದ ಅಮೂಲ್ಯ ಸಮಯವನ್ನು ವ್ಯರ್ಥ‌ಮಾಡಿದ್ದಾರೆ. ಮಹಾನಾಯಕ, ಮಹಾನಾಯಕಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳ ಮುತುವರ್ಜಿಯಲ್ಲೇ ಈ ಪ್ರಕರಣ ನಡೆದಿರುವ ಶಂಕೆ ರಾಜ್ಯದ ಜನತೆಯಲ್ಲಿ ಮೂಡುತ್ತಿದೆ, ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆ ನೀಡುವುದೇ? ಎಂದು ಪ್ರಶ್ನಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!