ಉಡುಪಿ: ಕೆ.ಆರ್.ಎಸ್ ರಾಜ್ಯ ಉಪಾಧ್ಯಕ್ಷ ಅಮೃತ್ ಶೆಣೈ ಮತ್ತೆ ಕಾಂಗ್ರೆಸ್ ಸೇರ್ಪಡೆ

ಉಡುಪಿ: (ಉಡುಪಿ ಟೈಮ್ಸ್ ವರದಿ)ರಾಜ್ಯದ ಪ್ರಾದೇಶಿಕ ಪಕ್ಷವಾಗಿ ಇತ್ತೀಚೆಗಷ್ಟೇ ಹುಟ್ಟಿದ ಕೆಆರ್ ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ, ಯುವ ಉದ್ಯಮಿ ಅಮೃತ್ ಶೆಣೈ ಮತ್ತೆ ಮಾತೃಪಕ್ಷ ಕಾಂಗ್ರೆಸ್ ಗೆ ಸೇರ್ಪಡೆಯಾಗುವ ಸುದ್ದಿಯೊಂದು ಹಬ್ಬಿದೆ.

ಹುಟ್ಟು ಕಾಂಗ್ರೆಸ್ಸಿಗರಾಗಿದ್ದ ಅಮೃತ್ ಶೆಣೈ, ಚತುರ ಸಂಘಟಕ ಮತ್ತು ಉತ್ತಮ ವಾಗ್ಮಿಯಾಗಿದ್ದು, ಇವರ ನಾಯಕತ್ವವನ್ನು ವೀಕ್ಷಿಸಿದ ಕಾಂಗ್ರೆಸ್ ಪಕ್ಷವು ಇವರನ್ನು ಎಐಸಿಸಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ರಾಜ್ಯದ ಹಲವು ಕಾಂಗ್ರೆಸ್ ಮುಖಂಡರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಅಮೃತ್ ಶೆಣೈ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಉಡುಪಿ ಜಿಲ್ಲಾ ನಾಯಕತ್ವದೊಂದಿಗೆ ಮುನಿಸಿಕೊಂಡು, ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದರು. ಲೋಕಸಭಾ ಚುನಾವಣೆಯ ಬಳಿಕ ಹೊಸ ಪ್ರಾದೇಶಿಕ ಪಕ್ಷ ಕೆ ಆರ್ ಎಸ್ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ರಾಜ್ಯದ ಪ್ರಮುಖ ಮುಖಂಡರು ಅಮೃತ್ ಶೆಣೈ ಅವರನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಿದ್ದರು. ಜೊತೆಗೆ ಹತ್ತು ಹಲವಾರು ಮಂದಿ ಕೆ ಆರ್ ಎಸ್ ಪಕ್ಷಕ್ಕೆ ಸೇರ್ಪಡೆಗೊಳಿಸುವಲ್ಲಿ ಅಮೃತ್ ಶೆಣೈ ಪಾತ್ರ ಬಹುದೊಡ್ಡದು.

ರಾಜ್ಯದಲ್ಲಿ ಕಾಂಗ್ರೆಸ್ ಬಿಜೆಪಿ ಬಲಿಷ್ಠ ಇರುವ ಹಿನ್ನೆಲೆಯಲ್ಲಿ ಮತ್ತು ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಅಮೃತ್ ಶೆಣೈ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಲು ಉತ್ಸುಕರಾಗಿದ್ದಾರೆ ಎಂದು ಮಾಹಿತಿಯೊಂದು ಲಭ್ಯವಾಗಿದೆ. ಈಗಾಗಲೇ ಉಡುಪಿ ಜಿಲ್ಲೆಯಲ್ಲಿ, ಎನ್ ಆರ್ ಸಿ, ಸಿಎಆರ್ ಆರ್ ವಿರುದ್ದ ಪ್ರತಿಭಟನೆ , ಸಹಬಾಳ್ವೆ , ಇತ್ತೀಚೆಗೆ ಮಣಿಪಾಲದಲ್ಲಿ ನಡೆದ ಕೊಂಕಣಿ ಸಮ್ಮೇಳನ ಯಶಸ್ವಿಯಾಗಿ ಆಯೋಜಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!