ರಾಜ್ಯದಲ್ಲಿ ರೂಪಾಂತರಿ ಕೊರೋನಾ ಆತಂಕಕಾರಿ ಮಟ್ಟದಲ್ಲಿ ಹರಡುತ್ತಿದೆ: ಸಚಿವ ಕೆ. ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಆತಂಕಾರಿಯಾಗುವ ಮಟ್ಟದಲ್ಲಿ ಹರಡುತ್ತಿದೆ.ಇದು ರೂಪಾಂತರಿ ಕೊರೋನಾ ಎಂಬುದು ನಿಶ್ಚಿತ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. 

ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು, ಸಧ್ಯಕ್ಕೆ ಇದರ ಹರಡುವ ವೇಗ ಹೆಚ್ಚಿದೆ. ಸಾವಿನ ಪ್ರಮಾಣ ಕಡಿಮೆ ಇದೆ. ಮುಂದಿನ ಆರು ವಾರಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಅಪಾಯ ನಿಶ್ಚಿತ. ಪ್ರಸ್ತುತ ಇರುವ ನಮ್ಮ ಆಸ್ಪತ್ರೆಗಳ ಸಾಮರ್ಥ್ಯದಲ್ಲಿ ಪರಿಸ್ಥಿತಿ ನಿಭಾಯಿಸುವುದು ಕಷ್ಟವಾಗುತ್ತದೆ. ಅನ್ಯ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರು ಹಾಗು ಬೆಂಗಳೂರು ನಗರ ಪ್ರವೇಶಕ್ಕೆ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಬೇಕಾದು ಅನಿವಾರ್ಯವೆನಿಸಿದೆ. ತಾಂತ್ರಿಕ ಸಲಹಾ ಸಮಿತಿಯೂ ಇದೇ ರೀತಿಯ ಸಲಹೆ ಮಾಡಿರುವುದಾಗಿ ಸುಧಾಕರ್ ಹೇಳಿದರು. 

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದರಿಂದ ಒಂಭತ್ತನೆಯ ತರಗತಿವರೆಗೆ ಪರೀಕ್ಷೆಯೇ ಇಲ್ಲದೆ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸಿಎಂ, ಶಿಕ್ಷಣ ಸಚಿವರು, ಗೃಹ ಸಚಿವರು ಕಂದಾಯ ಸಚಿವರೊಂದಿಗೆ ಚರ್ಚಿಸಿ ಅಧಿಕೃತವಾಗಿ ಪ್ರಕಟಿಸುವುದಾಗಿ ಸಚಿವರು ತಿಳಿಸಿದರು.

ಸುಧಾಕರ್-ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಮಾತನಾಡಿ, ನಮ್ಮ ಸ್ನೇಹಿತರು. ಮನೆ ಎದುರಿಗೆ ಇದ್ದಾರೆ. ಹಾಗಾಗಿ ಕಷ್ಟ ಸುಖ ನಾತನಾಡಬಂದಿದ್ದರು. ಕೆಲವು ಖಾಸಗಿಯಾಗಿಯೂ ಮಾತನಾಡಿದ್ದೇವೆ. ಸಿಡಿ ವಿಷಯದಲ್ಲಿ ಈಗಾಗಲೇ ಎಸ್ ಐಟಿ ತನಿಖೆ ನಡೆಯುತ್ತಿದೆ. ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದರು.

Leave a Reply

Your email address will not be published. Required fields are marked *

error: Content is protected !!