ಉಡುಪಿ: 115 ಮಂದಿಗೆ ಕೊರೋನಾ ಪಾಸಿಟಿವ್, ಓರ್ವ ಮೃತ್ಯು- ಮಣಿಪಾಲ ಸಾವಿರದ ಗಡಿಯತ್ತ ಸೋಂಕಿತರು

ಉಡುಪಿ(ಉಡುಪಿ ಟೈಮ್ಸ್ ವರದಿ) ಜಿಲ್ಲೆಯಲ್ಲಿ ಸಕ್ರಿಯ ಕೊರೋನಾ  ಪ್ರಕರಣಗಳ ಸಂಖ್ಯೆ ಸಾವಿರದ ಗಡಿಯತ್ತ ದಾಪುಗಾಲು ಇಡುತ್ತಿದೆ. ಇಂದು ಜಿಲ್ಲೆಯಲ್ಲಿ 115 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಜಿಲ್ಲೆಯಲ್ಲಿರುವ  ಸಕ್ರಿಯ ಪ್ರಕರಣಗಳ ಸಂಖ್ಯೆ 824 ಕ್ಕೆ ಏರಿಕೆಯಾಗಿದೆ.

ಉಡುಪಿಯಲ್ಲಿ 84, ಕುಂದಾಪುರ 24, ಕಾರ್ಕಳ 7 ಪ್ರಕರಣಗಳು ಪತ್ತೆಯಾಗಿದ್ದು , ಇಂದು ಮಣಿಪಾಲದ ಎಂಐಟಿ ಕ್ಯಾಂಪಸ್ ನಲ್ಲಿ 70 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಕಾರ್ಕಳದಲ್ಲಿ ಒಬ್ಬ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಮಾ.27 ರ ವರೆಗೆ ಒಟ್ಟು  4,14,182 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ ಈ ವರೆಗೆ 25,061 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ವರೆಗೆ ಜಿಲ್ಲೆಯಲ್ಲಿ ಪತ್ತೆಯಾದ ಕೋವಿಡ್ ಪಾಸಿಟಿವ್ ಪ್ರಕರಣಗಳ ಪೈಕಿ 24,046 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ. ‌191 ಮಂದಿ ಈ ವರೆಗೆ ಸೋಂಕಿಗೆ ಬಲಿಯಾಗಿದ್ದಾರೆ. 

Leave a Reply

Your email address will not be published. Required fields are marked *

error: Content is protected !!