18.75 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ- ಇಬ್ಬರ ಬಂಧನ
ಮಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಎರಡು ಪ್ರತ್ಯೇಕ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಾಸರಗೋಡು ನಿವಾಸಿ ಸುಕ್ಕುರ್ ಮೊಯಿದ್ದೀನ್ ಕುನ್ಹಿ (48 ವ) ಮತ್ತು ಭಟ್ಕಳದ ಮಿಸ್ರಿ ನಸೀಮುಲ್ ಗನಿ (44) ಎಂಬವರು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದರು.
ದುಬೈನಿಂದ ಬಂದ ವಿಮಾಣದಲ್ಲಿ ಮಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು 18.75 ಲಕ್ಷ ರೂ ಮೌಲ್ಯದ 405 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಲಾಗಿದೆ. ಆರೋಪಿಗಳು ವಿಶೇಷವಾಗಿ ವಿನ್ಯಾಸ ಮಾಡಿದ ಪಾದರಕ್ಷೆಯ ಒಳಗೆ ಚಿನ್ನವನ್ನಿಟ್ಟು ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳಾದ ಡಾ. ಕಪಿಲ್ ಗಡೆ, ರಾಕೇಶ್ ಕುಮಾರ್, ಸಂದೀಪ್ ಎಂ.ಎಸ್, ಚಂದ್ರಮೋಹನ್ ಮೀನಾ ಭಾಗವಹಿಸಿದ್ದರು.