ಉಡುಪಿ, ದ.ಕ.,ಉ.ಕ. ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಉಡುಪಿ: (ಉಡುಪಿ ಟೈಮ್ಸ್ ವರದಿ)ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾ.30 ರಿಂದ ಎ. 3 ರವರೆಗೆ 5 ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ.  

ಈಗಾಗಲೇ ರಾಜ್ಯದ ಕೆಲವೆಡೆ ಭಾರೀ ಮೆಳೆಯಾಗುತ್ತಿದ್ದು ಮಳೆಗಾಲ ಆರಂಭವಾಗಿದೆಯೇನೊ ಎಂಬಂತೆ ಭಾಸವಾಗುತ್ತಿದೆ. ಅಲ್ಲದೆ ಕರಾವಳಿಯ ಕೆಲವೆಡೆ ನಿನ್ನೆ ರಾತ್ರಿ ತುಂತುರು ಮಳೆಯಾಗಿದ್ದು ಇಂದು ಮುಂಜಾನೆ ಮೋಡ ಕವಿದ ವಾತಾವರಣ ಕಂಡುಬಂದಿದೆ.  

Leave a Reply

Your email address will not be published. Required fields are marked *

error: Content is protected !!