ಉಡುಪಿ: ಜಿಲ್ಲೆಯಲ್ಲಿ 53, ಮಣಿಪಾಲ ಎಂಐಟಿ ಕ್ಯಾಂಪಸ್ 18 ಪಾಸಿಟಿವ್ ಪ್ರಕರಣ ಪತ್ತೆ

ಉಡುಪಿ(ಉಡುಪಿ ಟೈಮ್ಸ್ ವರದಿ): ಕಳೆದ ಕೆಲ ದಿನಗಳಿಂದ ಏರಿಕೆಯ ಪ್ರಮಾಣದಲ್ಲಿ ಪತ್ತೆಯಾಗುತ್ತಿದ್ದ ಕೊರೋನಾ ಪ್ರಕರಣಗಳು ಇಂದು ಇಳಿಮುಖ ಕಂಡಿದೆ.  

ಇಂದು ಜಿಲ್ಲೆಯಲ್ಲಿ 53 ಕೊರೋನಾ ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿದ್ದು ಈ ಪೈಕಿ ಮಣಿಪಾಲದ ಎಂಐಟಿ ಕ್ಯಾಂಪಸ್ ನಲ್ಲಿ 18 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಉಡುಪಿ 33, ಕುಂದಾಪುರ 16, ಕಾರ್ಕಳ 3 ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.

ಸದ್ಯ ಜಿಲ್ಲೆಯಲ್ಲಿ 753 ಸಕ್ರಿಯ ಪ್ರಕರಣಗಳಿದ್ದು ಮಾ. 29 ರ ವೇಳೆಗೆ 4,18,510 ಮಂದಿಯ ಸ್ವಾಬ್ ಟೆಸ್ಟ್ ಮಾಡಲಾಗಿದ್ದು ಈ ಪೈಕಿ 25,185 ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದವು. ಇದುವರೆಗೆ ಜಿಲ್ಲೆಯಲ್ಲಿ 24,241 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು,191 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!