ಶಿರ್ವ: ಗ್ರಾ.ಪಂ. 12ನೇ ಕ್ಷೇತ್ರದ ಉಪ ಚುನಾವಣೆ- ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಜಯ
ಶಿರ್ವ: ಗ್ರಾಮ ಪಂಚಾಯತ್ನ 12ನೇ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನ್ಯಾರ್ಮ ಶ್ರೀನಿವಾಸ ಶೆಣೈ ಜಯಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿರ್ವ ಪೇಟೆಯಲ್ಲಿ ವಿಜಯಿ ಅಭ್ಯರ್ಥಿ ಶ್ರೀನಿವಾಸ ಶೆಣೈ, ಮತ್ತವರ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಮತ್ತು ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಇನ್ನು ಶಿರ್ವ ಗ್ರಾ.ಪಂ.ನ ಅಧ್ಯಕ್ಷರಾಗಿದ್ದ ದಿ.ಗ್ರೆಗೋರಿ ಕೊನ್ರಾಡ್ ಕ್ಯಾಸ್ರಲಿನೋ ಅವರ ನಿಧನದ ನಂತರ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆದಿದ್ದು, ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿಜಯಿಯಾಗಿದ್ದಾರೆ. ಡಾನ್ ಬೊಸ್ಕೊ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾ.29 ರಂದು ಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ಶೇ. 70.89 ಮತ ಚಲಾವಣೆಯಾಗಿದ್ದು, ಶ್ರೀನಿವಾಸ ಶೆಣೈ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲ್ಯಾನ್ಸಿ ಕೋರ್ಡಾ ಅವರ ವಿರುದ್ಧ 92 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಅದರಂತೆ ಶ್ರೀನಿವಾಸ ಶೆಣೈ ಅವರಿಗೆ 421 ಮತ ಲಭಿಸಿದ್ದು, ಲ್ಯಾನ್ಸಿ ಕೋರ್ಡಾ 329 ಮತ ಗಳಿಸಿದ್ದಾರೆ. ಚುನಾವಣೆಯಲ್ಲಿ 10 ಮತಗಳು ತಿರಸೃತಗೊಂಡಿವೆ ಎಂದು ತಿಳಿದು ಬಂದಿದೆ.