ಉಡುಪಿ: ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ, ಓರ್ವ ಮಹಿಳೆ ಸೋಂಕಿಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಇಂದು ಜಿಲ್ಲೆಯಲ್ಲಿ 56 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸಕ್ರಿಯ ಪ್ರಕಾರಗಳ ಸಂಖ್ಯೆ 667ಕ್ಕೆ ಇಳಿಕೆ ಯಾಗಿದೆ. 

ಜಿಲ್ಲೆಯ ಉಡುಪಿಯಲ್ಲಿ39, ಕುಂದಾಪುರ 8 , ಕಾರ್ಕಳ 6 ಹಾಗೂ ಹೊರ ರಾಜ್ಯದ 3 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಪೈಕಿ ಎಂಐಟಿ ಕ್ಯಾಂಪಸ್ ನಲ್ಲಿ 17 ಪ್ರಕರಣಗಳು ಪತ್ತೆಯಾಗಿದ್ದು, ಇಂದು ಓರ್ವ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಮಾ.30 ರ ವರೆಗೆ 4,20,024 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ 25,241 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೆ ಸೋಂಕಿನಿಂದ ಗುಣಮುಖರಾಗಿ 24,382  ಮಂದಿ ಡಿಶ್ಚಾರ್ಜ್ ಆಗಿದ್ದಾರೆ. 192 ಮಂದಿ ಈ ವರೆಗೆ ಸೋಂಕಿಗೆ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!