ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಕಾಂಗ್ರೆಸ್’ಗೆ ಭಾರೀ ಮುಖಭಂಗ – ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಗೆ ಜಯಭೇರಿ

ಮೈಸೂರು:  ಮೈಸೂರಿನ ಸರಗೂರು ಪಟ್ಟಣ ಪಂಚಾಯಿತಿಯ  12  ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ 6 ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಜಯಭೇರಿ ಬಾರಿಸಿದ್ದಾರೆ.

ಜೆಡಿಎಸ್‌ನ 3 ಅಭ್ಯರ್ಥಿಗಳು, ಕಾಂಗ್ರೆಸ್‌ನ ಇಬ್ಬರು ಮತ್ತು ಒಬ್ಬ ಪಕ್ಷೇತರರು ಗೆಲುವು ಸಾಧಿಸಿದ್ದಾರೆ,  ಕಾಂಗ್ರೆಸ್ ಪಕ್ಷವು 3ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದು ತೀವ್ರ ಮುಖಭಂಗ ಅನುಭವಿಸಿದೆ.

ಚ್‌ ಡಿ ಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಅನಿಲ್‌ ಚಿಕ್ಕಮಾದು ಅವರಿಗೆ ಈ ಚುನಾವಣೆ ಫಲಿತಾಂಶ ಮುಖಭಂಗ ಉಂಟುಮಾಡಿದೆ. ಬಿಜೆಪಿ ಇಲ್ಲಿ ಅನಿರೀಕ್ಷಿತ ಫಲಿತಾಂಶ ಪಡೆಯುವ ಮೂಲಕ ಅತೀ ಹೆಚ್ಚು ಸ್ಥಾನ ಗೆದ್ದಿದೆ. ಪಕ್ಷೇತರರ ಬೆಂಬಲ ಅಥವಾ ಜಿಡಿಎಸ್ ಬೆಂಬಲದಿಂದ ಬಿಜೆಪಿ ಪಟ್ಟಣ ಪಂಚಾಯತ್​​ನ ಅಧಿಕಾರ ಹಿಡಿಯುವ ಸಾಧ್ಯತೆ ಇದೆ.

ಎಚ್ ಡಿ ಕೋಟೆ ತಾಲೂಕಿನಲ್ಲಿರುವ ಸರಗೂರು ಪಟ್ಟಣ ಪಂಚಾಯಿತಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಗೆ ಸೇರಿದೆ. ಸಿದ್ದರಾಮಯ್ಯ ಪ್ರಾಬಲ್ಯವಿದ್ದರೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಈ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಹಲವು ಮಹಿಳೆಯರು ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!