ಬಹುಭಾಷಾನಟ ರಜನಿಕಾಂತ್’ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಮುಂಬೈ: ಚಿತ್ರರಂಗದ ಸಾಧಕರಿಗೆ ನೀಡುವ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಬಹು ಭಾಷಾ ನಟ ರಜನಿಕಾಂತ್ ಅವರು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಘೋಷಣೆ ಮಾಡಿದ್ದಾರೆ. ಇದೀಗ 2020ನೇ ಸಾಲಿನ 51ನೇ ದಾದಾ ಸಾಹೇಬ್ ಫಾಲ್ಕೆ ಪುರಸ್ಕಾರ ಬಹುಭಾಷಾನಟ ರಜನಿಕಾಂತ್ ಅವರಿಗೆ ಒಲಿದು ಬಂದಿದ್ದು, ಅವರ ಕೋಟ್ಯಾಂತರ ಅಭಿಮಾನಿಗಳಿಗೆ ಸಂತಸ ತಂದುಕೊಟ್ಟಿದೆ.

ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರ ಪ್ರತಿವರ್ಷ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ನೀಡುತ್ತಿದೆ. ಭಾರತೀಯ ಚಿತ್ರರಂಗದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಅವರ ಜನ್ಮ ಶತಾಬ್ದಿಯ ವರ್ಷ 1969ರಿಂದ ಈ ಪ್ರಶಸ್ತಿಯನ್ನು ಚಿತ್ರರಗಂದ ಮಹಾನ್ ಸಾಧಕರಿಗೆ ನೀಡಿ ಗೌರವಿಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!