ಉಡುಪಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಕೋವಿಡ್ ಪಾಸಿಟಿವ್ ದೃಢ
ಉಡುಪಿ: (ಉಡುಪಿ ಟೈಮ್ಸ್ ವರದಿ)ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದು, ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ.
ನಾನು ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯದ ಕಡೆಗೆ ನಿಗಾವಹಿಸಿಕೊಂಡು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದೀಗ ಶಾಸಕರ ಟ್ವೀಟ್ಗೆ ಅವರ ಆತ್ಮಿಯರು ಪ್ರತಿಕ್ರಿಯೆ ನೀಡಿದ್ದು, ಬೇಗ ಗುಣಮುಖರಾಗಿ ಬರುವಂತೆ ಹಾರೈಸಿದ್ದಾರೆ.