ಬಸ್ ನಲ್ಲಿ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಯುವಕನಿಗೆ ಹಲ್ಲೆ ಪ್ರಕರಣ: 8 ಮಂದಿ ವಶಕ್ಕೆ

ಮಂಗಳೂರು: ಬಸ್ ನಲ್ಲಿ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಯುವಕನಿಗೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿಯನ್ನು ಕಂಕನಾಡಿ ಪೊಲೀಸ್ ಠಾಣೆ ಮತ್ತು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಇಂದು ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ ಅವರು, “ಒಂದು ಗುಂಪು ಕಂಕನಾಡಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ತಡೆದು ಅದರಲ್ಲಿ ಯುವತಿಯೊಂದಿಗೆ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 8 ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, 307 ಮತ್ತು ಐಪಿಸಿಯ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಈ ಬಗ್ಗೆ ವಿವರವಾದ ವಿಚಾರಣೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಇನ್ನು ಇಬ್ಬರೂ ಒಬ್ಬರಿಗೊಬ್ಬರು ಪರಿಚಿತರಾಗಿದ್ದು, ಯುವತಿಯು ಬೆಂಗಳೂರಿನಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಉದ್ಯೋಗವನ್ನು ಹುಡುಕಲು ಹೊರಟಿದ್ದಳು. ಯುವತಿಗೆ ಬೆಂಗಳೂರಿನ ಪರಿಚಯವಿಲ್ಲದ ಕಾರಣ ಯುವಕನನ್ನು ತನ್ನೊಂದಿಗೆ ಕೆಲಸ ಹುಡುಕಲು ಕರೆದುಕೊಂಡು ಹೋಗಿದ್ದಾಳೆ ಎಂದು ತಿಳಿಸಿದ್ದಾರೆ.

ಎರಡು ತಿಂಗಳಲ್ಲಿ ಇಂತಹ ಮೂರರಿಂದ ನಾಲ್ಕು ಘಟನೆಗಳು ವರದಿಯಾಗಿವೆ ಎಂದ ಆಯುಕ್ತರು ಇನ್ನು ಮುಂದೆ ಈ ರೀತಿಯ ಯಾವುದೇ ಅಹಿತಕರ ಘಟನೆಗಳನ್ನು ತಪ್ಪಿಸಲು ಮುಂಜಾಗೃತಾ ಕ್ರಮವಾಗಿ ಸಂಜೆ ಮತ್ತು ರಾತ್ರಿಯ ಸಮಯದಲ್ಲಿ ಬಸ್ ನಿಲ್ದಾಣ, ಕಡಲ ತೀರಗಳು ಮತ್ತು ಉದ್ಯಾನವನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!