ಕೊರೋನ ಅಬ್ಬರ: ದ.ಕ.,ಉಡುಪಿ ಸಹಿತ 8 ಜಿಲ್ಲೆಗಳ ಬಾರ್ ಗಳಿಗೆ ಹೊಸ ನಿರ್ಬಂಧ

ಬೆಂಗಳೂರು: ಕೊರೋನ ಅಬ್ಬರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ (ಏ.2) ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಏಪ್ರಿಲ್ 20ರವರೆಗೆ ಈ ಮಾರ್ಗಸೂಚಿ ಜಾರಿಯಲ್ಲಿರಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಕೋವಿಡ್ ಸೋಂಕು ನಿಯಂತ್ರಣಕ್ಕೆ ಲಸಿಕೆ ಅಭಿಯಾನ ಚುರುಕುಗೊಳಿಸಲು ಸರ್ಕಾರ ತಿರ್ಮಾನಿಸಿದ್ದು, ರಾಜ್ಯದಲ್ಲಿ ಲಾಕ್ ಡೌನ್, ಸೆಮಿ ಲಾಕ್ ಡೌನ್, ನೈಟ್ ಕರ್ಫ್ಯೂ ವಿಧಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಆರೋಗ್ಯ ಇಲಾಖೆ ಮತ್ತಿತ್ತರ ಇಲಾಖಾಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಗಿಂತ ಸೋಂಕು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜನ ಜಾಗೃತಿ ಮೂಡಿಸಲಾಗುವುದು ಎಂದರು.

ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯಿದೆ ಉಲ್ಲಂಘನೆ ಮಾಡಿದರೆ ಕ್ರಮ ಜರುಗಿಸಬೇಕು. ಕೈಗಾರಿಕಾ ಪ್ರದೇಶ ಮತ್ತು ಅಪಾರ್ಟ್‌ಮೆಂಟ್ ಗಳಲ್ಲಿ ಲಸಿಕೆ ನೀಡಲು ತೀರ್ಮಾನಿಸಲಾಗಿದೆ. ಕೇಂದ್ರದಿಂದ ಮಾಸ್ಕ್, ಸಾಮಾಜಿಕ ಅಂತರ, ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದ್ದಾರೆ. ರಾಜ್ಯದಲ್ಲೂ ಕಟ್ಟುನಿಟ್ಟಿನ ಪರಿಪಾಲನೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

ಕೊರೋನಾ ತಡೆಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ರಿಲೀಸ್ ಮಾಡಿದ್ದು, ಜಿಮ್, ಸ್ಮಿಮ್ಮಿಂಗ್ ಪೂಲ್ ಸಂಪೂರ್ಣವಾಗಿ ಬಂದ್ ಆಗಲಿವೆ. 8 ಜಿಲ್ಲೆಗಳಲ್ಲಿ ಬಾರ್, ರೆಸ್ಟೋರೆಂಟ್, ಪಬ್, ಕ್ಲಬ್ ಗಳಿಗೆ ಹೊಸ ನಿರ್ಬಂಧ ಹೇರಿದೆ . 6ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಕ್ಲಾಸ್ ಗಳನ್ನು ಬಂದ್ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಕ್ಷಿಣ ಕನ್ನಡ, ಮೈಸೂರು, ಕಲಬುರಗಿ, ಉಡುಪಿ, ಬೀದರ್, ಧಾರವಾಡದಲ್ಲಿ ಈ ಮಾರ್ಗಸೂಚಿ ಪಾಲನೆಯಾಗಲಿವೆ. ರಾಜ್ಯಾದ್ಯಂತ ಜಿಮ್, ಸ್ಮಿಮ್ಮಿಂಗ್ ಸಂಪೂರ್ಣ ಬಂದ್ ಆಗಲಿವೆ. ಸಿನಿಮಾ ಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.

ರಾಜ್ಯಾದ್ಯಂತ 6ರಿಂದ 8ನೇ ತರಗತಿವರೆಗೆ ಶಾಲೆಗಳನ್ನು ಬಂದ್ ಮಾಡಲಾಗಿದೆ. ಈ ಕುರಿತು ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ವಿದ್ಯಾಗಮ ಸೇರಿದಂತೆ ಎಲ್ಲ ರೀತಿಯ ಶೈಕ್ಷಣಿಕ ಚಟುವಟಿಕೆ ಬಂದ್ ಆಗಲಿದೆ.

ಹೊಸ ಮಾರ್ಗಸೂಚಿಗಳು

  • ರಾಜ್ಯಾದ್ಯಂತ ಜಿಮ್ ಮತ್ತು ಸ್ವಿಮ್ಮಿಂಗ್ ಫೂಲ್ ಗಳನ್ನು ಸಂಪೂರ್ಣ ಬಂದ್
  • ಸಾರಿಗೆ ಬಸ್ ಗಳಲ್ಲಿ ನಿಗದಿತ ಆಸನದ ಮೀತಿ ಮೀರುವಂತಿಲ್ಲ
  • ರಾಜ್ಯಾದ್ಯಾಂತ ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್
  • ಯಾವುದೇ ರೀತಿಯ, ರ್ಯಾಲಿ, ಮುಷ್ಕರ ನಡೆಸುವಂತಿಲ್ಲ ಧಾರ್ಮಿಕ ಆಚರಣೆ, ಜಾತ್ರೆ ನಿಷೇಧ. 
  • ರಾಜ್ಯಾದ್ಯಂತ 6 ರಿಂದ 9 ತರಗತಿಗಳು ಬಂದ್
  • 11 ಮತ್ತು 12 ತರಗತಿಗಳು ಅಸ್ತಿತ್ವದಲ್ಲಿರುವ ಮೋಡ್‌ನಲ್ಲಿ ಮುಂದುವರಿಯಬಹುದು. ಆದಾಗ್ಯೂ, ಈ ತರಗತಿಗಳಿಗೆ ವೈಯಕ್ತಿಕವಾಗಿ ಹಾಜರಾಗುವುದು ಕಡ್ಡಾಯವಲ್ಲ.
  • ಬೋರ್ಡ್ / ಯೂನಿವರ್ಸಿಟಿ ಪರೀಕ್ಷೆಗಳು ಮತ್ತು ಆರೋಗ್ಯ ವಿಜ್ಞಾನಗಳ ತರಗತಿಗಳನ್ನು ಹೊರತುಪಡಿಸಿ ಉನ್ನತ ಮತ್ತು ವೃತ್ತಿಪರ ಕೋರ್ಸ್‌ಗಳ ತರಗತಿಗಳನ್ನು ಅಮಾನತುಗೊಳಿಸಲಾಗುತ್ತದೆ.
  • ಉನ್ನತ ಮತ್ತು ವೃತ್ತಿಪರ ಕೋರ್ಸ್‌ಗಳ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರೆ ಬೋರ್ಡಿಂಗ್ ಶಾಲೆಗಳು ಮತ್ತು ವಸತಿ ವಸತಿ ನಿಲಯಗಳನ್ನು ಮುಚ್ಚಬೇಕು.
  • ಪೂಜಾ ಸ್ಥಳಗಳಲ್ಲಿ ವ್ಯಕ್ತಿಗಳಿಗೆ ಮಾತ್ರ ಭೇಟಿ ನೀಡಲು ಮತ್ತು ಪ್ರಾರ್ಥನೆ ಸಲ್ಲಿಸಲು ಅನುಮತಿ ಇದೆ. ಯಾವುದೇ ಕೂಟಗಳು, ಕಾರ್ಯಗಳು ಇತ್ಯಾದಿ ಇರಬಾರದು.
  • ಅಪಾರ್ಟ್ಮೆಂಟ್ ಸಂಕೀರ್ಣಗಳಲ್ಲಿ, ಜಿಮ್, ಪಾರ್ಟಿ ಹಾಲ್, ಕ್ಲಬ್ ಹೌಸ್, ಈಜುಕೊಳ ಮುಂತಾದ ಸಾಮಾನ್ಯ ಸೌಲಭ್ಯಗಳು ಬಂದ್ ಮಾಡಬೇಕು.
  • ಮನೆಯಿಂದ ಕೆಲಸದ ಅಭ್ಯಾಸವನ್ನು ಸಾಧ್ಯವಾದಷ್ಟು ಕಚೇರಿಗಳು ಮತ್ತು ಕೆಲಸದ ಸ್ಥಳಗಳಲ್ಲಿ ಅನುಸರಿಸಬೇಕು.
  • ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕಲ್ಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಚಿತ್ರಮಂದರಿಗಳಲ್ಲಿ ಗರಿಷ್ಠ 50% ಆಸನಕ್ಕೆ ಅನುಮತಿ.
  • ಬೆಂಗಳೂರು, ಮೈಸೂರು, ಕಲ್ಬುರ್ಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಹುಬಳ್ಳಿ – ಧಾರವಾಡ ಸೇರಿದಂತೆ ಬೆಂಗಳೂರು ನಗರ ಮತ್ತು ಗ್ರಾಮೀಣ ಜಿಲ್ಲೆಗಳಲ್ಲಿ. ಪಬ್‌ಗಳು, ಬಾರ್‌ಗಳು, ಕ್ಲಬ್‌ಗಳು, ರೆಸ್ಟೋರೆಂಟ್‌ಗಳಲ್ಲಿನ ಗ್ರಾಹಕರ ಸಂಖ್ಯೆ ಶೇ.50 ಮೀರಬಾರದು.

=

Leave a Reply

Your email address will not be published. Required fields are marked *

error: Content is protected !!