ಉಡುಪಿ: 95 ಕೊರೋನಾ ಪಾಸಿಟಿವ್ ದೃಢ
ಉಡುಪಿ(ಉಡುಪಿ ಟೈಮ್ಸ್ ವರದಿ): ಉಡುಪಿ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಪತ್ತೆಯಾಗುತ್ತಿದ್ದರೂ, ಕಳೆದ ಕೆಲ ದಿನಗಳಿಂದ 700ರ ಅಂಚಿನಲ್ಲಿದ್ದ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 443ಕ್ಕೆ ಇಳಿಮುಖವಾಗಿದೆ.
ಇಂದು ಜಿಲ್ಲೆಯಲ್ಲಿ 95 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ಉಡುಪಿ 57, ಕುಂದಾಪುರ 30, ಕಾರ್ಕಳ 8 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಮಣಿಪಾಲದ ಎಂಐಟಿ ಕ್ಯಾಂಪಸ್ನಲ್ಲಿ 22 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಏ.1 ರ ವರೆಗೆ ಜಿಲ್ಲೆಯಲ್ಲಿ ಒಟ್ಟು 4,23,225 ಮಂದಿಯನ್ನು ಕೋವಿಡ್ ಟೆಸ್ಟ್ಗೆ ಒಳಪಡಿಸಿದ್ದು ಈ ಪೈಕಿ 35,389 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೆ 24,754 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 192 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.