ಮಲ್ಪೆ: ಹಾವು ಕಚ್ಚಿ ಮಹಿಳೆ ಮೃತ್ಯು
ಮಲ್ಪೆ: ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಸಬಿತಾ(43) ಮೃತಪಟ್ಟವರು. ಇವರು ಏ.2 ರಂದು ತೋಟದಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ವೇಳೆ ತೆಂಗಿನಕಟ್ಟೆಯಲ್ಲಿದ್ದ ಹುಲ್ಲು ತೆಗೆಯುತ್ತಿದ್ದಾಗ ಇವರ ಕಾಲಿಗೆ ವಿಷಪೂರಿತ ಹಾವು ಕಚ್ಚಿದೆ.
ಈ ವೇಳೆ ತಕ್ಷಣ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ವಾರ್ಡ್ ಗೆ ಸ್ಥಳಾಂತರಿಸಿದ ಬಳಿಕ ಅವರು ಮತ್ತೆ ಅಸ್ವಸ್ಥಗೊಂಡಿದ್ದರು. ಈ ವೇಳೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.