ಶಿವಾಜಿ ಮಹಾರಾಜ್ ಯುವ ಜನಾಂಗಕ್ಕೆ ಆದರ್ಶ: ನ್ಯಾಯವಾದಿ ದಿನೇಶ್ ನಾಯ್ಕ್
ಉಡುಪಿ: ಸನಾತನ ಹಿಂದೂ ಧರ್ಮದ ಬಗ್ಗೆ ಎಲ್ಲೂ ರಾಜಿಮಾಡಿಕೊಳ್ಳದೆ ಹಿಂದೂ ಧರ್ಮದ ಉಳಿವಿಗಾಗಿ ಅವಿರತ ಹೋರಾಟ ನಡೆಸಿದ ಶಿವಾಜಿ ಮಹಾರಾಜ್ ಯುವ ಜನಾಂಗಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಉಡುಪಿ ಛತ್ರಪತಿ ಶಿವಾಜಿ ವಿವಿಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷ, ನ್ಯಾಯವಾದಿ ದಿನೇಶ್ ಸಿ.ನಾಯ್ಕ್ ತಿಳಿಸಿದ್ದಾರೆ.
ಅವರು ಉಡುಪಿಯ ಛತ್ರಪತಿ ಶಿವಾಜಿ ವಿವಿಧೋದ್ಧೇಶ ಸಹಕಾರ ಸಂಘದ ಪ್ರಧಾನ ಕಛೇರಿಯಲ್ಲಿ ಗುರುವಾರ ತಿಥಿಯಾನುಸಾರ ಶಿವಾಜಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿವಾಜಿ ಜಯಂತಿಯನ್ನು ಸರಕಾರ ಮತ್ತು ಸಂಘ ಸಂಸ್ಥೆಗಳು ತಿಥಿಯಾನುಸಾರ ಆಚರಣೆ ಮಾಡಲು ಮುಂದಾಗಬೇಕು ಎಂದರು.
ಬೆಂಗಳೂರಿನ ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿಯ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್. ಮಾತನಾಡಿ, ಸಹಕಾರಿ ಕ್ಷೇತ್ರದಲ್ಲೂ ಶಿವಾಜಿ ಜಯಂತಿಯನ್ನು ಆಚರಿಸುವ ಮೂಲಕ ಛತ್ರಪತಿ ಶಿವಾಜಿ ವಿವಿಧೋದ್ಧೇಶ ಸಹಕಾರ ಸಂಘ ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಮಣಿಪಾಲ ಸಾರಸ್ವತ ಸೌಹಾರ್ದ ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಭುವನೇಶ್ ಪ್ರಭು, ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟದ ಮುಖ್ಯಕಾರ್ಯನಿರ್ವಹಣಾಧಿಕಾರಿ ಲೋಹಿತ್ ಜಿ.ಸಾಲ್ಯಾನ್, ಮೀನುಮಾರಾಟಗಾರರ ವಿವಿಧೋದ್ಧೇಶ ಸೌಹಾರ್ದ ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಕಾಶ ಸುವರ್ಣ ಕಟಪಾಡಿ, ಅನಂತ ಪದ್ಮನಾಭ ಸಹಕಾರಿ ಸಂಘದ ಶಾಖಾಪ್ರಬಂಧಕ ಕಿರಣ್ ಮುಳ್ಳಕಟ್ಟೆ, ಶಾಲಾ ಶಿಕ್ಷಕಿ ಸಾವಿತ್ರಿ ಕೆ, ಲತಾ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.ಉಡುಪಿ ಛತ್ರಪತಿ ಶಿವಾಜಿ ವಿವಿಧೋದ್ಧೇಶ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಸ್ವಾಗತಿಸಿ, ವಂದಿಸಿದರು.