1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಎಲ್ಲರೂ ಪಾಸ್!

ಮುಂಬೈ: ಮಹಾರಾಷ್ಟ್ರದಲ್ಲಿ  ಒಂದರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತಿದೆ. ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೆಕಂಡರಿ ಮತ್ತು ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದೆ ಈ ನಿರ್ಧಾರ ಕೈಗೊಂಡಿದೆ. 

ಅಂತಿಮ ವರ್ಷದ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ವಿದ್ಯಾರ್ಥಿಗಳನ್ನು ಕಳುಹಿಸಲಾಗುತ್ತಿದೆ.  ಮಹಾರಾಷ್ಟ್ರದಲ್ಲಿ 47, 827 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ರಾಜ್ಯಾದ್ಯಂತ ಒಟ್ಟಾರೇ ಸೋಂಕಿತರ ಸಂಖ್ಯೆ 2, 904,076ಕ್ಕೆ ತಲುಪಿದೆ.

ಮಹಾರಾಷ್ಟ್ರ ರಾಜ್ಯದಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದೆರಡು ದಿನಗಳಲ್ಲಿ ಕಠಿಣ ನಿರ್ಬಂಧಗಳನ್ನು ಘೋಷಿಸುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಹೇಳಿದ್ದರು. ಅಲ್ಲದೇ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗದಿದ್ದಲ್ಲಿ ಲಾಕ್ ಡೌನ್ ಹೇರುವ ಎಚ್ಚರಿಕೆಯನ್ನು ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!