1-9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತು ಇನ್ನೆರಡು ದಿನಗಳಲ್ಲಿ ನಿರ್ಧಾರ: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿಯಿಂದ ಒಂಭತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವ ಗೊಂದಲಕ್ಕೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಅವರು ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು, ಶಿಕ್ಷಣ ತಜ್ಞರು, ಖಾಸಗಿ ಶಾಲೆಗಳ ಮುಖ್ಯಸ್ಥರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಎಂ ಜೊತೆ ಸಭೆ-ಚರ್ಚೆ ನಡೆಸುತ್ತಿದ್ದು ಇನ್ನೆರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.

ಈಗಾಗಲೇ 6-9 ರವರೆಗೆ ತರಗತಿಗಳನ್ನು ಏಪ್ರಿಲ್ 20ರವರೆಗೆ ಸ್ಥಗಿತ ಮಾಡಿ ಆದೇಶ ಹೊರಡಿಸಲಾಗಿದೆ. 1-9 ರವರೆಗಿನ ತರಗತಿಗಳಿಗೆ ಪರೀಕ್ಷೆ ಬೇಡವೋ ಬೇಕೋ ಎಂಬ ಚರ್ಚೆ ನಡೆದಿದೆ.  ಖಾಸಗಿ ಶಾಲೆಗಳ‌ ಒಕ್ಕೂಟ ಮತ್ತು ಪೋಷಕರ ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಸಭೆಯಲ್ಲಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ಅವರು ಸಲಹೆ ಕೊಟ್ಟಿದ್ದಾರೆ ಎಂದರು.

Leave a Reply

Your email address will not be published. Required fields are marked *

error: Content is protected !!