ಸಿಡಿ ಪ್ರಕರಣದ ತನಿಖಾ ವರದಿ ಸಲ್ಲಿಸಿ: ರಾಜ್ಯ ಸರ್ಕಾರ, ಎಸ್ ಐಟಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರ ಮತ್ತು ಎಸ್ ಐಟಿಗೆ ಹೈಕೋರ್ಟ್ ಸೋಮವಾರ ತಿಳಿಸಿದೆ.
ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ವಕೀಲ ಉಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಮುಚ್ಚಿದ ಲಕೋಟೆಯಲ್ಲಿ ತನಿಖಾ ಪ್ರಗತಿಯ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಹಾಗೂ ಎಸ್ ಐಟಿಗೆ ತಿಳಿಸಿತು.
ಮಾಧ್ಯಮಗಳಿಗೆ ಎಸ್ ಐಟಿಯಿಂದ ಮಾಹಿತಿ ಸೋರಿಕೆ ಕುರಿತಂತೆ ಮತ್ತೋರ್ವ ವಕೀಲ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ವಿನಾಕಾರಣ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿತು.