ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮತ್ತೆ ಮಳೆ: ಹವಮಾನ ಇಲಾಖೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮತ್ತೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ರಾಜ್ಯದಲ್ಲಿ ಹಲವೆಡೆ ಏ. 6 ರಿಂದ 10ರ ವರೆಗೆ ಮಳೆಯಾಗಲಿದೆ.
ಈ ಪೈಕಿ ಏ. 6ರಂದು ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಾಗೂ ಏ. 7ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಇನ್ನು ಏ. 8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಏ. 9 ಹಾಗೂ 10ರಂದು ದ.ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ರಾಯಚೂರು, ಹಾಸನ, ಚಿಕ್ಕಮಗಳೂರು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.