ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಕೋರಿದ್ದ ಅರ್ಜಿ ವಜಾ: ಸುಪ್ರೀಂ
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಪರೀಕ್ಷೆ ರದ್ದುಪಡಿಸುವಂತೆ ಕೋರಿ ಬೆಳಗಾವಿಯ ರಾಜಶ್ರೀ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್, ಕೃಷ್ಣ ಮುರಾರಿ ಹಾಗೂ ಎಸ್.ರವೀಂದ್ರ ಭಟ್ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
‘ಅರ್ಜಿ ವಿಚಾರಣೆಗೆ ಯೋಗ್ಯವಾಗಿಲ್ಲ. ಸರ್ಕಾರದ ನಿರ್ಧಾರದಲ್ಲಿ ಮಧ್ಯ ಪ್ರವೇಶ ಸರಿಯಲ್ಲ. ಈಗಾಗಲೇ ಈ ಸಂಬಂಧ ಹೈಕೋರ್ಟ್ ನೀಡಿರುವ ತೀರ್ಪು ಸರಿಯಾಗಿದೆ’ ಎಂದು ನ್ಯಾಯಪೀಠ ಹೇಳಿದೆ.
ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿದರು.
ಸುಪ್ರೀಂ ಕೋರ್ಟ್ನ ಈ ತೀರ್ಪಿನಿಂದಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಿಗದಿತ ವೇಳಾಪಟ್ಟಿಯ ಅನುಸಾರ ನಡೆಯಲಿವೆ.