ಏ.7 ರಂದು ಸಾರಿಗೆ ನೌಕರರಿಂದ ಮತ್ತೆ ಮುಷ್ಕರಕ್ಕೆ ಕರೆ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏ.7 ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದಲೇ ಸಾರಿಗೆ ಬಸ್ ಪ್ರಯಾಣಿಕರಿಗೆ ಸಿಗೋದು ಕಷ್ಟ ಎಂದೇ ಹೇಳಲಾಗುತ್ತಿದೆ.

ಈ ನಡುವೆ ನಾಳೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಲಿರುವ ಬಸ್ ಪ್ರಯಾಣಿಕರಿಗೆ ಖಾಸಗಿ ಬಸ್ ಗಳಲ್ಲಿ ದುಪ್ಪಟ್ಟು ಟಿಕೆಟ್ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಗಳಿವೆ. ಯಾಕೆಂದರೆ ಸಾರಿಗೆ ನೌಕರರ ಮುಷ್ಕರವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬಸ್ ಗಳಲ್ಲಿ ಟಿಕೆಟ್ ದರವನ್ನು ದುಪ್ಪಟ್ಟು ಹೆಚ್ಚಳ ಮಾಡುವ ಸಾಧ್ಯತೆಗಳು ಹೆಚ್ಚು ಎನ್ನಲಾಗುತ್ತಿದೆ.

ಈ ಮೂಲಕ ಸಾಮಾನ್ಯ ದಿನಗಳಲ್ಲಿ ರೂ.600, 700 ಇರುವ ಟಿಕೆಟ್ ದರ, ನಾಳೆ ರೂ.1,200, ರೂ.1,300ಕ್ಕೆ ಏರಿಕೆಯಾಗಲಿದೆ ಎನ್ನಲಾಗುತ್ತಿದೆ. ಹೀಗಾಗಿ ಬೆಳಗಾವಿ, ಹುಬ್ಬಳ್ಳಿ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ತೆರಳುವಂತ ಬಸ್ ಪ್ರಯಾಣಿಕರಿಗೆ ಸಾರಿಗೆ ಬಸ್ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ದರ ಹೆಚ್ಚಳದ ಬಿಸಿ ಕೂಡ ತಟ್ಟಲಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!