ನಾಳೆ ಸಾರಿಗೆ ನೌಕರರ ಮುಷ್ಕರ ಹಿನ್ನಲೆ ಖಾಸಗಿ ವಾಹನ ಬಳಕೆಗೆ ರಾಜ್ಯ ಸರ್ಕಾರ ಆದೇಶ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಏ. 7ರಂದು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಸರ್ಕಾರ ಖಾಸಗಿ ವಾಹನಗಳನ್ನು ಬಳಸಿಕೊಳ್ಳಲು ಆದೇಶಿಸಿದೆ.

ಈ ಸಂಬಂಧ ಮುಖ್ಯ ಸಂಚಾರ ವ್ಯವಸ್ಥಾಪಕರು ಹೊರಡಿಸಿರುವ ಆದೇಶದಲ್ಲಿ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ನೀಡುವಲ್ಲಿ ಯಾವುದೇ ವೈಫಲ್ಯಗಳು ಆಗಬಾರದೆಂಬ ದೃಷ್ಟಿಯಿಂದ ಖಾಸಗಿ ಮತ್ತು ಶಾಲಾ ವಾಹನಗಳನ್ನು ಮುಷ್ಕರದ ಅವಧಿಯಲ್ಲಿ ಬಳಸಿಕೊಂಡು ಸಾರ್ವಜನಿಕರಿಗೆ ಸೂಕ್ತ ಸಾರಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಆಯುಕ್ತರು ತಿಳಿಸಿದಂತೆ ಆಯಾ ಜಿಲ್ಲಾಡಳಿತಗಳ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಖಾಸಗಿ ವಾಹನಗಳನ್ನು ನಿಗಮದ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲು ಮತ್ತು ಬಸ್ ನಿಲ್ದಾಣಗಳಲ್ಲಿ ನಿಲ್ಲಿಸಿಕೊಳ್ಳಲು ಅನುಮತಿ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಕೋರಲಾಗಿದೆ.

ಆರನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ, ಸಾರಿಗೆ ನೌಕರರೊಂದಿಗೆ ಮತ್ತೆ ಮಾತುಕತೆಯ ಪ್ರಶ್ನೆಯೂ ಇಲ್ಲ, ಮುಷ್ಕರಕ್ಕೆ ಮುಂದಾದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ,ಎಸ್ಮಾ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕೋವಿಡ್ ಪರಿಸ್ಥಿತಿಯಲ್ಲಿ ಮುಷ್ಕರ ನಡೆಸದಂತೆ ಮನವಿ ಮಾಡಿದ್ದೇವೆ. 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಸಾಧ್ಯವಿಲ್ಲವಾದರೂ ಶೇ.8ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಸಿದ್ಧವಿದೆ. ಪ್ರಸಕ್ತ ಉಪಚುನಾವಣೆಯಿರುವ ಕಾರಣ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವೇತನ ಹೆಚ್ಚಳದ ಘೋಷಣೆ ಸಾಧ್ಯವಿಲ್ಲ. ಪ್ರತಿನಿತ್ಯ 4 ಕೋಟಿ ನಷ್ಟ ಆಗುತ್ತಿದೆ ಆಗಿದ್ದರೂ ಸಂಬಂಳ ನೀಡಿದ್ದೇವೆ, ಶೇ.8 ರಷ್ಟು ಹೈಕ್ ಮಾಡಲು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇವೆ. ಒಂದು ವೇಳೆ ಚುನಾವಣಾ ಆಯೋಗ ಅನುಮತಿ ನೀಡಿದರೆ ಘೋಷಣೆ ಮಾಡುತ್ತೇವೆ ಎಂದರು.

ನಾಳಿನ‌ ಮುಷ್ಕರದ ವೇಳೆ ಗುಂಪು ಗುಂಪು ಸೇರುವಂತಿಲ್ಲ. ಕೋವಿಡ್ ನಿಯಮ ಉಲ್ಲಂಘಿಸುವಂತಿಲ್ಲ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವಂತಿಲ್ಲ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಗೆ ದರ ನಿಗದಿ ಮಾಡುತ್ತೇವೆ ಆ ದರದಂತೆ ಹಣ ವಸೂಲಿ ಮಾಡಬೇಕು. ರಜೆ, ಹಬ್ಬ ಇರುವುದರಿಂದ ವಿಶೇಷ ರೈಲು ವ್ಯವಸ್ಥೆ ಮಾಡಲು ರೈಲ್ವೇ ಇಲಾಖೆ ಜೊತೆ ಮಾತನಾಡುವುದಾಗಿ ರವಿಕುಮಾರ್ ಸ್ಪಷ್ಟಪಡಿಸಿದರು

Leave a Reply

Your email address will not be published. Required fields are marked *

error: Content is protected !!