ಸಾರಿಗೆ ನೌಕರರ ಮುಷ್ಕರ- ಎ.7 ರ ಮಂಗಳೂರು ವಿ.ವಿ ಪರೀಕ್ಷೆ ಮುಂದೂಡಿಕೆ
ಮಂಗಳೂರು : ಸಾರಿಗೆ ನೌಕರರ ಮುಷ್ಕರ ಹಿನ್ನಲೆಯಲ್ಲಿ ಎ.7 ಕ್ಕೆ ನಿಗದಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಸರಕಾರಿ ಬಸ್ ಸಂಚಾರ ಸ್ಥಗಿತ ಹಿನ್ನೆಲೆ ಎ.7 ರಂದು ನಿಗದಿಯಾಗಿದ್ದ ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ವಿವಿ ಪರೀಕ್ಷಾಂಗ ಕುಲಸಚಿವ ಡಾ. ಧರ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.