ಶಿರ್ವ: ಮದುವೆಯಾಗದ ಕೊರಗಿನಿಂದ ನೊಂದು, ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ
ಶಿರ್ವ: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವಾ ಗ್ರಾಮದ ಕೋಡು ಮೂಡುಮನೆಯಲ್ಲಿ ನಡೆದಿದೆ. ಅಶೋಕ ಸಫಲಿಗ(37) ಆತ್ಮಹತ್ಯೆ ಮಾಡಿಕೊಂಡವರು.
ಇವರು ಅವಿವಾಹಿತರಾಗಿದ್ದು ಕಳೆದ 8 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖವಾಗಿರುವುದಿಲ್ಲ. ಇದೇ ವೇದನೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಹಾಗೂ ಮದುವೆಯಾಗದೇ ಇದ್ದುದರಿಂದಲೂ ಮನನೊಂದು ಏ.6 ರಂದು ಮನೆಯ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.