ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಸಾರಿಗೆ ಇಲಾಖೆಯಿಂದ ಹಲವು ರೀತಿಯ ಪರ್ಯಾಯ ವ್ಯವಸ್ಥೆ: ಲಕ್ಷ್ಮಣ ಸವದಿ

ಬೆಂಗಳೂರು: ಕೆಲವರ ಚಿತಾವಣೆಯಿಂದ ಸಾರಿಗೆ ನೌಕರರು ಮುಷ್ಕರ ಪ್ರಾರಂಭಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. 

ಸಾರ್ವಜನಿಕರು ಯಾವುದೇ ರೀತಿಯ ಗೊಂದಲಕ್ಕೊಳಗಾಗಬಾರದು ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ. 

ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಸವದಿ,ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ಸಹ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಪ್ರಾಾರಂಭಿಸಿದ್ದಾರೆ. 

ಅಲ್ಲದೇ ನಾಳೆಯೂ ಮುಷ್ಕರ ಮುಂದುವರೆಸುವ ನಿರ್ಧಾರವನ್ನು ಸಾರಿಗೆ ನೌಕರರ ಒಕ್ಕೂಟದ ಮುಖಂಡರು ಕೈಗೊಂಡಿರುವುದು ದುರ್ದೈವದ ವಿಚಾರವಾಗಿದೆ. ಆದರೆ ಮುಷ್ಕರದಿಂದ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಸರ್ಕಾರವು ಹಲವು ರೀತಿಯಲ್ಲಿ ಪರ್ಯಾಯ ವ್ಯವಸ್ಥೆ ಕೈಗೊಂಡಿರುವುದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ. 

ಸಾರಿಗೆ ನೌಕರರ ವೇತನ ಹೆಚ್ಚಳಕ್ಕಾಗಿ ಚುನಾವಣಾ ಆಯೋಗದ ಅನುಮತಿಗಾಗಿ ಮನವಿ ಮಾಡಿಕೊಳ್ಳಲಾಗಿದೆ. ಒಂದು ವೇಳೆ ಚುನಾವಣಾ ಆಯೋಗ ಈ ಬಗ್ಗೆ ಅನುಮತಿ ನೀಡಿದಲ್ಲಿ ಮುಂದಿನ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ‌

Leave a Reply

Your email address will not be published. Required fields are marked *

error: Content is protected !!