ಉಡುಪಿ: ಗೋವಾಕ್ಕೆ ತೆರಳಿದ ವ್ಯಕ್ತಿ ನಾಪತ್ತೆ
ಉಡುಪಿ: ಗೋವಾ ಹೋಗುವುದಾಗಿ ತಿಳಿಸಿ ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ರಮಾನಾಥ ನಾಯಕ್(57) ನಾಪತ್ತೆಯಾದವರು.
ಇವರು ಅಪಾರ್ಟ್ಮೆಂಟ್ ವೊಂದರಲ್ಲಿ ಒಬ್ಬರೇ ವಾಸವಾಗಿದ್ದರು. ಮಾ.24 ರಂದು ಮಧ್ಯಾಹ್ನದ ವೇಳೆಗೆ ಪಕ್ಕದ ಮನೆಯ ವಿನಾಯಕ ಬಾಳಿಗರವರಲ್ಲಿ ಗೋವಾ ಹೋಗುವುದಾಗಿ ತಿಳಿಸಿ ತೆರಳಿದ್ದಾರೆ. ಆದರೆ ಬಳಿಕ ಅವರ ಮೊಬೈಲ್ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಎಂದು ಬಂದಿರುತ್ತದೆ. ಈ ಕುರಿತು ಅವರ ಸಂಬಂಧಿಕರಲ್ಲಿ ವಿಚಾರಿಸಲಾಗಿದ್ದು, ಯಾವುದೇ ಸುಳಿವು ಸಿಕ್ಕಿರುವುದಿಲ್ಲ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.