ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳಿಗೆ ಹೊಸ ಎಸ್ಒಪಿ ಜಾರಿ: ಸುರೇಶ್ ಕುಮಾರ್

ವಿಜಯಪುರ: ಕಳೆದ ವರ್ಷ 10 ಮತ್ತು 12ನೇ ತರಗತಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳನ್ನು ಕೊರೋನಾ ವಾರಿಯರ್ಸ್ ಗಳೆಂದು ಪರಿಗಣಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ,

ಬಾಗಲಕೋಟೆ, ಚಿಕ್ಕೋಡಿ, ವಿಜಯಪುರ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳ ಪೂರ್ವ ತಯಾರಿಯ ಪರಿಶೀಲನಾ ಸಭೆ ನಡೆಸಿದ ಅವರು ಕಳೆದ ವರ್ಷ ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿದ್ದರೂ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಬಗ್ಗೆ ಸಚಿವರು ಮಾತನಾಡಿದರು.

ಬೋರ್ಡ್ ಪರೀಕ್ಷೆಗಳು ಯಾವುದೇ ಅಡೆತಡೆ ಇಲ್ಲದೇ ಸರಾಗವಾಗಿ ನಡೆಯುವ ದೃಷ್ಟಿಯಿಂದ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ಮೇ 24 ರಿಂದ ಪಿಯುಸಿ ಹಾಗೂ ಜೂನ್ 21 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ ಅವರು ಎಲ್ಲಾ ಸಿಬ್ಬಂದಿ, ಶಿಕ್ಷಕರು ಮತ್ತು  ಬೋಧಕೇತರ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.

1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಸಂಬಂಧ ಇನ್ನೂ ತೀರ್ಮಾನ ಕೈಗೊಂಡಿಲ್ಲ, ಪರೀಕ್ಷೆ ನಡೆಸಬೇಕೆ ಅಥವಾ ಬೇಡವೆ ಎಂಬ ಬಗ್ಗೆ ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

1 thought on “ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳಿಗೆ ಹೊಸ ಎಸ್ಒಪಿ ಜಾರಿ: ಸುರೇಶ್ ಕುಮಾರ್

Leave a Reply

Your email address will not be published. Required fields are marked *

error: Content is protected !!