ಒಂದೇ ಠಾಣೆಯ 60 ಪೊಲೀಸ್ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆ!

ಬೆಂಗಳೂರು: ರಾಜ್ಯದಲ್ಲಿ ಎಲ್ಲೆಡೆ ಕೊರೋನಾ ಎರಡನೇ ಅಲೆ ಮಿತಿ ಮೀರಿ ಬೆಳೆಯುತ್ತಿದೆ. ಇದೀಗ ಈ ಮಹಾಮಾರಿ ಕೊರೋನಾ ಪೊಲೀಸ್ ಠಾಣೆಗೆ ಒಕ್ಕರಿಸಿದ್ದು. ಒಂದೇ ಠಾಣೆಯ 60 ಮಂದಿ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗಿದೆ.
 ಕೊರೋನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುವತ್ತಿರುವ ಪೊಲೀಸರಿಗೂ ಮಹಾಮಾರಿ ಒಕ್ಕರಿಸಿದ್ದು, ಬೆಂಗಳೂರಿನ ಚಂದ್ರ ಲೇಔಟ್ ಪೊಲೀಸ್ ಠಾಷೆಯ 60 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸೋಂಕಿತರ ಸಂಪರ್ಕದಲ್ಲಿ ಇರುವವರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಇನ್ನು, ಬೆಂಗಳೂರಲ್ಲಿ ದಿನ ನಿತ್ಯವೂ ಬರೋಬ್ಬರಿ 5 ಸಾವಿರ ದಂಚಿನಲ್ಲಿ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದು, ಬರೋಬ್ಬರಿ 35 ಸಾವಿರಕ್ಕೂ ಅಧಿಕ ಸಕ್ರೀಯ ಪ್ರಕರಣಗಳಿವೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!