ಹೆಬ್ರಿ: ಬಸ್ ಸ್ಟಾಂಡ್’ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಹೆಬ್ರಿ: ಬಸ್ ಸ್ಟಾಂಡ್ ನಲ್ಲಿ ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಏ.8) ಹೆಬ್ರಿಯ ಚಾರಗ್ರಾಮದಲ್ಲಿ ನಡೆದಿದೆ. ಪ್ರಶಾಂತ್ ಸೇರಿಗಾರ (29) ಆತ್ಮಹತ್ಯೆ ಮಾಡಿಕೊಂಡವರು.
ಹೆಬ್ರಿಯ ಕೋಳಿಯಂಗಡಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಇವರಿಗೆ 1 ವರ್ಷದ ಹಿಂದೆ ಮದುವೆಯಾಗಿತ್ತು. ಇವರ ಹೆಂಡತಿಯು ಹೆಬ್ರಿಯ ಖಾಸಗಿ ಸಂಸ್ಥೆಯೊಂದರಲ್ಲಿ ದುಡಿಯುತ್ತಿದ್ದು, ಕೌಟುಂಬಿಕ ಸಮಸ್ಯೆಯಿಂದ ಇಂದು ಮುಂಜಾನೆ ತಮ್ಮ ಮನೆಯ ಹತ್ತಿರದ ಬಸ್ ಸ್ಟಾಂಡ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.