ನಾಳೆ ನಡೆಯಬೇಕಾಗಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

ಮೈಸೂರು: ನಾಳೆ ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್ ಪರೀಕ್ಷೆ)ಯನ್ನು  ಮುಂದೂಡಲಾಗಿದೆ.

ಮೈಸೂರು ವಿಶ್ವವಿದ್ಯಾನಿಲಯವು ಕೆ-ಸೆಟ್ ಪರೀಕ್ಷೆಯನ್ನು ಏಪ್ರಿಲ್ 11 ರಂದು ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿತ್ತು. ಆದರೆ, ಕಾರಣಾಂತರಗಳಿಂದ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಲಾಗಿದೆ.

ಮುಂದಿನ ಕೆಸೆಟ್ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ಕೆಸೆಟ್ ವೆಬ್ ಸೈಟ್ ನಲ್ಲಿ ಪ್ರಚುರಪಡಿಸಲಾಗುವುದು ಎಂದು ಮೈಸೂರು ವಿವಿ ಕೆ-ಸೆಟ್ ಸಂಯೋಜಕ ಪ್ರೊ.ಹೆಚ್.ರಾಜಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಬಸ್ ಸಂಚಾರ ಬಂದ್ ಮಾಡಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎನ್ನಲಾಗಿದೆ.

ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆ-ಸೆಟ್ 2021 ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್ ಸೈಟ್ (http://kset.uni-mysore.ac.in) ನಲ್ಲಿ ಆಗಿಂದಾಗ್ಗೆ ಹೊರಡಿಸುವ ವಿಷಯಗಳನ್ನು ವೀಕ್ಷಿಸುವಂತೆ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!