ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್ ಪಾಸಿಟಿವ್ ದೃಢ
ಉಡುಪಿ ಏ.10 (ಉಡುಪಿ ಟೈಮ್ಸ್ ವರದಿ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಖುದ್ದು ಅವರೇ ಸಾಮಾಜಿಕ ಜಾಲ ತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಕೋವಿಡ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಇನ್ನು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಚಿವರು ಮಾಹಿತಿ ಹಂಚಿಕೊಳ್ಳುತ್ತಿದ್ದಂತೆ ಅನೇಕ ಮಂದಿ ಅವರ ಆಪ್ತರು ಬೇಗ ಗುಣಮುಖವಾಗಿ ಬನ್ನಿ ಎಂದು ಹಾರೈಸಿದ್ದಾರೆ