ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ – ಹಣಕ್ಕೆ ಬೇಡಿಕೆ!
ಉಡುಪಿ: ಜಿಲ್ಲಾಧಿಕಾರಿ ಜಿ. ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್‌ಬುಕ್ ಅಕೌಂಟ್ ರಚಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆಜಿಲ್ಲಾಧಿಕಾರಿಗಳು ತಮ್ಮ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನನ್ನ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಅಕೌಂಟ್ ಮಾಡಿದ್ದು, ಅದರಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ನಾನು ಪೊಲೀಸರಿಗೆ ದೂರು ನೀಡಿದ್ದೇನೆ ದಯವಿಟ್ಟು ಯಾರೂ ಹಣ ಕೊಡಬೇಡಿ ಎಂದು ವಿನಂತಿ ಮಾಡಿಕೊಂಡಿದ್ದಾರೆ.
ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್‌ಬುಕ್ ಅಕೌಂಟ್ ರಚಿಸಿ, ಫೋನ್ ಪೇ ಮೂಲಕ ಏಳು ಸಾವಿರ ಹಣವನ್ನು ಸಂಬಂಧಿಕರ ಅಕೌಂಟಿಗೆ ವರ್ಗಾಯಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೈಬರ್ ಠಾಣೆಗೆ ದೂರು ನೀಡಿದ್ದು, ಯಾರೂ ಹಣ ಕೊಡದಂತೆ ವಿನಂತಿಸಿಕೊಂಡಿದ್ದಾರೆ.