ಮತ್ತೆ ಏರಿಕೆ ಹಾದಿಯಲ್ಲಿ ಕೋವಿಡ್ ಪಾಸಿಟಿವ್ ಕೇಸ್: ಉಡುಪಿ-92, ದ.ಕ-133 ಮಂದಿ ಸೋಂಕಿತರು
ಉಡುಪಿ ಏ.11(ಉಡುಪಿ ಟೈಮ್ಸ್ ವರದಿ): ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಕೂಡ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದೆ.
ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆಯಾದರೂ ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಇದು ಜಿಲ್ಲೆಯ ಜನತೆ ಕೊಂಚ ನಿರಾಳರಾಗುವಂತೆ ಮಾಡಿದೆ.
ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಇಂದು ಜಿಲ್ಲೆಯಲ್ಲಿ 92 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಉಡುಪಿಯಲ್ಲಿ 38, ಕುಂದಾಪುರದಲ್ಲಿ 44, ಕಾರ್ಕಳದಲ್ಲಿ 10 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ 371 ಪ್ರಕರಣಗಳು ಸಕ್ರಿಯವಾಗಿದೆ. ಜಿಲ್ಲೆಯಲ್ಲಿ ಏ.10ರ ವೇಳೆಗೆ 4,45,125 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ಈ ವರೆಗೆ 25,972 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು 25,409 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು , ಈ ವರೆಗೆ 192 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಹೆಚ್ಚಾಗುತ್ತಿರುವ ಕೊರೋನಾ ಪಾಸಿಟಿವ್: ಇಂದು ಬರೋಬ್ಬರಿ 133 ಮಂದಿಗೆ ಕೊರೋನಾ ಪಾಸಿಟಿವ್ ಧೃಡವಾಗಿದೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 743, ಇಂದು 26 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 36,785 ಪಾಸಿಟಿವ್ ಕೇಸ್ , ಸದ್ಯ 1,072 ಆಕ್ವೀವ್ ಕೇಸ್ ಇದೆ.
ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 10,250 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,65,290ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 40 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,889ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 7,584 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,81,982ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 27 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 2,638 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,83,157ಕ್ಕೆ ಏರಿಕೆಯಾಗಿದೆ. ಇನ್ನು 69,225 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 440 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.