ಕರಾವಳಿಯಲ್ಲಿ ಮುಂದಿನ 5 ದಿನಗಳ (ಏ.17) ಕಾಲ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ
ಉಡುಪಿ ಏ.12(ಉಡುಪಿ ಟೈಮ್ಸ್ ವರದಿ): ಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏ.12 ರಿಂದ ಏ.17ರ ವರೆಗೆ ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
Very useful