ನಾಪತ್ತೆಯಾಗಿದ್ದ ಮಟ್ಟು ನಿವಾಸಿಯ ಮೃತದೇಹ ಪೊದೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಡುಪಿ ಏ.13(ಉಡುಪಿ ಟೈಮ್ಸ್ ವರದಿ): ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಕಟಪಾಡಿ ಪೇಟೆಯಲ್ಲಿ ನಡೆದಿದೆ. ಉಡುಪಿಯ ಮಟ್ಟು ನಿವಾಸಿ ಸಂದೀಪ (30) ಮೃತಪಟ್ಟವರು. ಇವರ ಮೃತದೇಹವು ಕಟಪಾಡಿ ಪೇಟೆಯ ಗೂಡಂಗಡಿ ಹಿಂಬಾಗದ ಪೊದೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇವರು ಏಪ್ರಿಲ್ 4 ರಿಂದ ಕಾಣೆಯಾಗಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿನ್ನೆ ಕುತ್ತಿಗೆಗೆ ಬೆಲ್ಟ್ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ ಈ ಬಗ್ಗೆ ಹೆಚ್ಚಿನ ಮಾಹಿತಿ ಮರಣೋತ್ತರ ಪರೀಕ್ಷೆಯ ಬಳಿಕ ತಿಳಿದು ಬರಬೇಕಿದೆ. ಸ್ಥಳಕ್ಕೆ ಕಾಪು ಎಸ್‍ಐ ರಾಘವೇಂದ್ರ ಸಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!