3 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವ ಮೂಲಕ ಸಿದ್ದರಾಮಯ್ಯ ಅಡ್ರಸ್ ಇಲ್ಲದ ನಾಯಕರಾಗಲಿದ್ದಾರೆ: ನಳಿನ್ ಕುಮಾರ್

ಬೆಂಗಳೂರು, ಎ.13 : ರಾಜ್ಯದ ಮೂರೂ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವ ಮೂಲಕ ಸಿದ್ದರಾಮಯ್ಯ ಅವರು ಅಡ್ರಸ್ ಇಲ್ಲದ ನಾಯಕರಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ “ಕಾಂಗ್ರೆಸ್ ಪಕ್ಷ ಅಧಿಕಾರ ಇಲ್ಲದಿದ್ದಾಗ ಕುತಂತ್ರ, ಷಡ್ಯಂತ್ರ ಮತ್ತು ವಿಡಿಯೋ ರಾಜಕಾರಣ ಮಾಡುತ್ತವೆ. ಸೋಲಿನ ಹತಾಶೆಯಿಂದ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ” “ರಾಜ್ಯದ ಮೂರೂ ಸ್ಥಾನಗಳು ಬಿಜೆಪಿ ಪಾಲಾಗಲಿವೆ. ಈ ಮೂಲಕ ಸಿದ್ದರಾಮಯ್ಯ ಅವರು ಅಡ್ರಸ್ ಇಲ್ಲದ ನಾಯಕರಾಗಲಿದ್ದಾರೆ” ಎಂದು ಬರೆದುಕೊಂಡಿದೆ.

Leave a Reply

Your email address will not be published. Required fields are marked *

error: Content is protected !!