ಮೀನುಗಾರಿಕಾ ಬೋಟ್ ದುರಂತ, ಮೂವರ ಮೃತ್ಯು, 6 ಮಂದಿ ನಾಪತ್ತೆ
ಮಂಗಳೂರು, ಏ.13: ಮೀನುಗಾರಿಕಾ ಬೋಟ್ವೊಂದು ಅಪಘಾತಕ್ಕೀಡಾಗಿ ಮೂವರು ಮೀನುಗಾರರು ಮೃತಪಟ್ಟು 6 ಮಂದಿ ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ನಡೆದಿದೆ. ಘಟನೆ ವೇಳೆ ಬೋಟ್ನಲ್ಲಿ ಅಪಾಯದಲ್ಲಿದ್ದ ಉಳಿದ 5 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಈ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಮೀನುಗಾರಿಕಾ ಬೋಟ್ ಕೇರಳದ ಕೋಝಿಕೋಡ್ ಜಿಲ್ಲೆಯ ಬೇಪೋರ್ ನಿಂದ ಹೊರಟಿತ್ತು. ಇದರಲ್ಲಿ ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದರು ಎನ್ನಲಾಗಿದೆ. ನಾಪತ್ತೆಯಾಗಿರುವ ಪತ್ತೆಗೆ ಕರಾವಳಿ ಪಡೆಯ ಮೂರು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.