ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು: ‘ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು’ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿ ಬುಧವಾರ ಬೆಳಿಗ್ಗೆ ಮಾತನಾಡಿದ ಅವರು, ‘ಲಾಕ್ಡೌನ್ ಜಾರಿ ಮಾಡದೆ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.
‘ಇದೇ 18 ರಂದು ಸರ್ವಪಕ್ಷಗಳ ನಾಯಕರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಸಮಗ್ರವಾಗಿ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.
ರಾಜ್ಯದ ಏಳು ಜಿಲ್ಲೆಗಳ ನಗರಗಳು ಮತ್ತು ಮಣಿಪಾಲದಲ್ಲಿ ರಾತ್ರಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಗತ್ಯಬಿದ್ದರೆ, ಇನ್ನೂ ಒಂದೆರಡು ಜಿಲ್ಲೆಗಳಿಗೆ ರಾತ್ರಿ ಕರ್ಪ್ಯೂ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗುವುದು’ ಎಂದೂ ಹೇಳಿದರು.