ಲಾಕ್ ಡೌನ್ ಜಾರಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ: ಬೊಮ್ಮಾಯಿ

ಬೀದರ್: ರಾಜ್ಯದಲ್ಲಿ ಲಾಕ್ ಡೌನ್ ಕುರಿತಾಗಿ ಸುಳ್ಳು ಸುದ್ದಿ ಹರಡುವವರಿಗೆ ಗೃಹ ಸಚಿವ ಬಸವ ರಾಜ ಬೊಮ್ಮಾಯಿ ಅವರು ಎಚ್ಚರಿಕೆಯನ್ನು ನೀಡಿದ್ದಾರೆ. ಈ ಬಗ್ಗೆ ಬೀದರ್ ಜಿಲ್ಲೆಯ ಹುಮನಾಬಾದ್ ನಲ್ಲಿ ಮಾತನಾಡಿರುವ ಅವರು, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಇಲ್ಲ. ಲಾಕ್ ಡೌನ್ ಜಾರಿ ಮಾಡದೇ ಕೊರೊನಾ ನಿಯಂತ್ರಿಸಲಾಗುವುದು. ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಲಾಕ್ ಡೌನ್ ಬಗ್ಗೆ ಊಹಾಪೋಹಗಳನ್ನು ಜನರು ನಂಬಬಾರದು ಎಂದ ಅವರು, ಲಾಕ್ಡೌನ್ ವಿಚಾರವಾಗಿ ರಾಜ್ಯಸರ್ಕಾರಕ್ಕೆ ಸ್ಪಷ್ಟತೆ ಇದೆ. ಲಾಕ್ಡೌನ್ ಜಾರಿ ಮಾಡದೆ ಕೊರೋನಾ ನಿಯಂತ್ರಣ ಮಾಡುವುದು ನಮ್ಮ ಆದ್ಯತೆಯಾಗಿದೆ. ಹಾಗಾಗಿ ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ನಿಯಮ ಜಾರಿಗೊಳಿಸಲಾಗಿದೆ. ಜನರು ಈ ನಿಯಮಗಳನ್ನು ಪಾಲಿಸಿದರೆ ಸೋಂಕು ನಿಯಂತ್ರಿಸಬಹುದು. ಈ ಹಿನ್ನೆಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿ ಮಾಡುವುದಿಲ್ಲ. ಯಾರಾದರೂ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿ ಹರಡಿದರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇನ್ನು ಉಪಚುನಾವಣೆ ಮುಗಿದ ಬಳಿಕ ಸಿಎಂ ಯಡಿಯೂರಪ್ಪ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ವೇಳೆ ಸಭೆಯಲ್ಲಿ ಚರ್ಚಿಸಿ ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಇದೇ ವೇಳೆ ತಿಳಿಸಿದರು.

1 thought on “ಲಾಕ್ ಡೌನ್ ಜಾರಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ: ಬೊಮ್ಮಾಯಿ

Leave a Reply

Your email address will not be published. Required fields are marked *

error: Content is protected !!