ಸಂವಿಧಾನದ ಬದಲಾವಣೆಯ ಮಾತು ಪ್ರಜಾಪ್ರಭುತ್ವಕ್ಕೆ ಆಘಾತ: ಸೊರಕೆ
ಉಡುಪಿ ಎ.14 (ಉಡುಪಿ ಟೈಮ್ಸ್ ವರದಿ): ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್.ಸಿ. ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ, 130 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದಲ್ಲಿ ಜಾತಿಯ ಹೆಸರಿನಲ್ಲಿ ತುಳಿತಕ್ಕೊಳಗಾದ ಜನರಿಗೆ ನ್ಯಾಯ ದೊರಕಿಸಿ ಕೊಡಲು ನಿರಂತರ ಹೋರಾಟದ ಮೂಲಕ ತನ್ನ ಜೀವನವನ್ನೇ ಮುಡಿಪಾಗಿಟ್ಟವರು ಅಂಬೇಡ್ಕರ್‍ರರು. ಅವರು ದೇಶಕ್ಕೆ ಕೊಟ್ಟ ಸಂವಿಧಾನವನ್ನು ಬದಲಾವಣೆ ಮಾಡುವ ಮಾತು ಕೇಳಿ ಬರುತ್ತಿರುವುದು ಆಘಾತಕಾರಿ. ಇಂತಹ ಮಾತು ಪ್ರಜಾಪ್ರಭುತ್ವಕ್ಕೆ ಅಪಾಯವನ್ನು ತಂದುಕೊಡಬಹುದು. ಇಂದು ದಲಿತರು, ಹಿಂದುಳಿದ ವರ್ಗದವರು ಅಂಬೇಡ್ಕರ್‍ರವರ ಸಂವಿಧಾನದಿಂದ ಪ್ರಯೋಜನ ಪಡೆದುಕೊಳ್ಳುವಂತಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಕೆ.ಪಿ.ಸಿ.ಸಿ. ಸಂಯೋಜಕರಾದ ನವೀನ್‍ಚಂದ್ರ ಶೆಟ್ಟಿ, ಆರ್.ಜಿ.ಪಿ.ಆರ್.ಎಸ್.ನ ರೋಶನಿ ಒಲಿವರ್, ಜಿಲ್ಲಾ ಕಾಂಗ್ರೆಸ್‍ನ ಪ್ರಖ್ಯಾತ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶಬ್ಬೀರ್ ಅಹ್ಮದ್, ಹರೀಶ್ ಕಿಣಿ, ಯುವ ಕಾಂಗ್ರೆಸ್‍ನ ಅಬ್ದುಲ್ ಅಜೀಜ್ ಹೆಜಮಾಡಿ, ಕೀರ್ತಿ ಶೆಟ್ಟಿ, ಎನ್.ಎಸ್.ಯು.ಐ. ಅಧ್ಯಕ್ಷರಾದ ಸೌರಭ್ ಬಲ್ಲಾಳ್, ಕೇಶವ ಎಂ, ಕೋಟ್ಯಾನ್, ಉದ್ಯಾವರ ನಾಗೇಶ್ ಕುಮಾರ್, ಹರೀಶ್ ಶೆಟ್ಟಿ ಪಾಂಗಾಳ, ಕೃಷ್ಣಮೂರ್ತಿ ಆಚಾರ್ಯ, ಲೂಯಿಸ್ ಲೋಬೋ, ದಿನೇಶ್ ಕೋಟ್ಯಾನ್, ಸದಾಶಿವ ಕಟ್ಟೆಗುಡ್ಡೆ, ಬ್ಲಾಕ್ ಎಸ್.ಸಿ. ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ, ಮೇರಿ ಡಿ’ಸೋಜಾ, ಜಯಶ್ರೀ ಶೇಟ್, ಶಾಂತಿ ಪಿರೇರಾ, ಸತೀಶ್ ಮಂಚಿ, ಯುವರಾಜ್ ಪುತ್ತೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕೆರೆ ಮೊದಲಾದವರು ಉಪಸ್ಥಿತರಿದ್ದರು.