ಉಡುಪಿ: ಮತ್ತೆ ಏರಿಕೆ ಹಾದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ
ಉಡುಪಿ ಎ.14(ಉಡುಪಿ ಟೈಮ್ಸ್ ವರದಿ) ಜಿಲ್ಲೆಯಲ್ಲಿ ಮತ್ತೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಾ ಇದೆ. ಇಂದು ಜಿಲ್ಲೆಯಲ್ಲಿ 110 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಈ ಪೈಕಿ ಉಡುಪಿಯಲ್ಲಿ 71, ಕುಂದಾಪುರ 26, ಕಾರ್ಕಳ 8 ಹಾಗೂ ಹೊರ ಜಿಲ್ಲೆಯ 5 ಮಂದಿಯಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 474 ಕ್ಕೆ ಏರಿಕೆಯಾಗಿದೆ. ಇನ್ನು ಎ.13 ರ ವೇಳೆಗೆ 4,54,567 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 26,258 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ. ಈ ವರೆಗೆ ಜಿಲ್ಲೆಯಲ್ಲಿ 25,592 ಮಂದಿ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂಡಿದ್ದು, ಈ ವರೆಗೆ 192 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ