ಸಿಎಂ ಯಡಿಯೂರಪ್ಪಗೆ ಜ್ವರ, ಬೆಳಗಾವಿಯ ಹೊಟೇಲ್’ನಲ್ಲಿ ಚಿಕಿತ್ಸೆ, ವಿಶ್ರಾಂತಿ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣಾ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಪರ ಮತಯಾಚನೆಗೆ ಬಂದಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಜ್ವರ, ಸುಸ್ತು ಬಳಲಿಕೆ ಕಂಡುಬಂದ ಹಿನ್ನೆಲೆಯಲ್ಲಿ ಸದ್ಯ ತಾವು ಉಳಿದುಕೊಂಡಿರುವ ಹೊಟೇಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ನಿನ್ನೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಳಗಾವಿಗೆ ಆಗಮಿಸಿ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಮತಯಾಚನೆ ಮಾಡಿದ್ದರು. ನಂತರ ಸಾಯಂಕಾಲ ಇದ್ದಕ್ಕಿದ್ದಂತೆ ಜ್ವರ, ಸುಸ್ತು ಕಂಡುಬಂತು. ತಾವು ಉಳಿದುಕೊಂಡಿದ್ದ ಹೊಟೇಲ್ ಗೆ ಬಂದರು. ಆಗ ಕೆಎಲ್ ಇ ಆಸ್ಪತ್ರೆಯ ವೈದ್ಯರು ಬಂದು ಆರೋಗ್ಯ ತಪಾಸಣೆ ಮಾಡಿದರು.

ವೈದ್ಯರು ಸಿಎಂ ಯಡಿಯೂರಪ್ಪನವರ ಆರೋಗ್ಯ ತಪಾಸಣೆ ಮಾಡಿ ಔಷಧಿಯನ್ನು ನೀಡಿದ್ದು ಸದ್ಯ ಸಿಎಂ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ ಮತ್ತೆ ಬಿಮ್ಸ್ ಆಸ್ಪತ್ರೆಯ ವೈದ್ಯರು ತಪಾಸಣೆಗೆ ಬಂದಿದ್ದಾರೆ.

ನಿನ್ನೆ ಹಗಲೇ ಮುಖ್ಯಮಂತ್ರಿಗಳಿಗೆ ಜ್ವರ ಕಂಡುಬಂದಿತ್ತು. ಆದರೂ ಮೂಡಲಗಿ, ಗೋಕಾಕ್ ನಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದರು. ಗೋಕಾಕ್ ನಲ್ಲಿ ರೋಡ್ ಶೋನಲ್ಲಿ ಭಾಗಿಯಾಗಿದ್ದರು. ಇಂದು ಕೂಡ ಸಿಎಂ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಸದ್ಯ ಮುಖ್ಯಮಂತ್ರಿಗಳು ವಾಸ್ತವ್ಯ ಹೂಡಿರುವ ಆಸ್ಪತ್ರೆ ಸುತ್ತ ಸ್ಯಾನಿಟೈಸ್ ಮಾಡಲಾಗಿತ್ತು ಮುಂಜಾಗ್ರತೆ ವಹಿಸಲಾಗುತ್ತಿದೆ. 

Leave a Reply

Your email address will not be published. Required fields are marked *

error: Content is protected !!