ಮಲಬಾರ್ ಗೋಲ್ಡ್ ವತಿಯಿಂದ: 40 ಮಂದಿ ಪತ್ರಿಕಾ ವಿತರಕರಿಗೆ ಆಹಾರ ಕಿಟ್ ವಿತರಣೆ

ಉಡುಪಿ, ಎ.15: ಉಡುಪಿ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಹಯೋಗದಲ್ಲಿ ಪ್ರತಿದಿನ ಮನೆಮನೆಗೆ ಪತ್ರಿಕೆಯನ್ನು ಹಂಚುವ ಬಡ ಪತ್ರಿಕಾ ವಿತರಕರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮವು ಗುರುವಾರ ಉಡುಪಿಯ ಪತ್ರಿಕಾ ಭವನದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸಾಂಕೇತಿಕವಾಗಿ ಕಿಟ್‌ಗಳನ್ನು ವಿತರಿಸಿದರು. ಉಡುಪಿ ಜಿಲ್ಲೆಯ ಒಟ್ಟು 40 ಮಂದಿ ಬಡ ಫಲಾನುಭವಿಗಳಿಗೆ ಆಹಾರ ಕಿಟ್‌ನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರೆಹಮಾನ್, ಗೆಸ್ಟ್ ರಿಲೇಷನ್ ಮೆನೇಜರ್ ರಾಘವೇಂದ್ರ ನಾಯಕ್, ತಂಝೀಮ್ ಶಿರ್ವ, ಪ್ರೆಸ್‌ಕ್ಲಬ್ ಸಂಚಾಲಕ ಸುಬಾಷ್ ಚಂದ್ರ ವಾಗ್ಳೆ ಉಪಸ್ಥಿತರಿದ್ದರು.  ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಚೇತನ್ ಮಟಪಾಡಿ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

error: Content is protected !!