ಉಡುಪಿಯಲ್ಲಿ ರಾರಾಜಿಸಿದ ಬ್ರಹತ್ ಮಾಸ್ಕ್
ಉಡುಪಿ,ಜೂ,18; ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಇವರಿಂದ, ಕೊರೊನಾ ನಿಯಂತ್ರಣ ಅಭಿಯಾನ, ಮಾಸ್ಕ್ ದಿನಾಚರಣೆ ಕಾರ್ಯಕ್ರಮವು ಮಾರುಥಿ ವಿಥೀಕಾದಲ್ಲಿ ಗುರುವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಅವರು, ಕೊರೊನಾ ಸೋಂಕು ಸಮುದಾಯಕ್ಕೆ ಹರಡದಂತೆ ನಿಯಂತ್ರಿಸುವ ಮುನ್ನೆಚ್ಚರಿಕೆಯ ಅಗತ್ಯ ಕ್ರಮಗಳನ್ನು ಹೇಳಿದರು.
ಸಾಯಿರಾಂ ಬಟ್ಟೆ ಮಳಿಗೆಯವರು ಉಚಿತವಾಗಿ ಒದಗಿಸಿದ ಹತ್ತಿಬಟ್ಟೆ ಬಳಸಿಕೊಂಡು, ಕ್ಲಾಸಿಕ್ ಟಚ್ ಟೈಲರ್ಸ್ ತಂಡದವರು ತಯಾರಿಸಿದ, 6 ಅಡಿ ಉದ್ದ, 5 ಅಡಿ ಅಗಲದ ಬೃಹತ್ ಗಾತ್ರದ ಮಾಸ್ಕ್ ಪ್ರದರ್ಶನವು ನಡೆಯಿತು. ಬೃಹತ್ ಗಾತ್ರದ ಮಾಸ್ಕ್ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಕೊರೊನಾ ನೊಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಕ್ತಿವೇಲು ಸಂಪನ್ಮೂಲ ಅತಿಥಿಗಳಾಗಿದ್ದರು. ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಪ್ರಾಸ್ತವಿಕ ನುಡಿಗಳಾಡಿದರು. ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ವಂದಿಸಿದರು. ರಾಜೇಶ ಶೆಟ್ಟಿ, ರಾಘವೇಂದ್ರ ಕರ್ವಾಲು, ಸಮಿತಿಯ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.